Mandya | ನದಿಯಲ್ಲಿ ಸ್ನಾನ ಮಾಡಲು ಹೋಗಿ ಯುವಕ ನೀರುಪಾಲು
ಮಂಡ್ಯ : ನದಿಯಲ್ಲಿ ಸ್ನಾನ ಮಾಡಲು ಹೋಗಿ ಯುವಕ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಮಂಡ್ಯದ ಸಂಗಮ ಬಳಿಯ ಕಾವೇರಿ ನದಿಯಲ್ಲಿ ನಡೆದಿದೆ.
26 ವರ್ಷದ ಅಶೋಕ್ ನದಿಯಲ್ಲಿ ಕೊಚ್ಚಿಹೋದ ಯುವಕನಾಗಿದ್ದು, ಈತ ಬೆಂಗಳೂರಿನ ಯಲಹಂಕ ನಿವಾಸಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಈತ ಕುಟುಂಬಸ್ಥರು, ಸ್ನೇಹಿತರೊಂದಿಗೆ ಸಂಗಮಕ್ಕೆ ಪೂಜೆಗಾಗಿ ಬಂದಿದ್ದರು.
ಬೆಳಿಗ್ಗೆ ನದಿಯಲ್ಲಿ ಸ್ನಾನ ಮಾಡುವಾಗ ಯುವಕ ಕಾಲು ಜಾರಿ ನದಿಗೆ ಬಿದ್ದು, ನೀರನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ.
ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ 30ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ.
ಇನ್ನು ಸಂಗಮದ ಬಳಿ ಅಶೋಕ್ ಕುಟುಂಬಸ್ಥರ ಆಕ್ರಂಧನ ಮುಗಿಲುಮುಟ್ಟಿದೆ.