Heavy Rain | ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಕೃಷ್ಣಾ ನದಿ
ಬೆಳಗಾವಿ : ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಜಿಲ್ಲೆಯ ಸಪ್ತನದಿಗಳು ಮೈದುಂಬಿ ಹರಿಯುತ್ತಿವೆ.
ಹೀಗಾಗಿ ಕೃಷ್ಣಾ ನದಿಗೆ ಸಾಕಷ್ಟು ಪ್ರಮಾಣದ ನೀರು ಬಂದು ಸೇರುತ್ತಿದೆ.
ಜೊತೆಗೆ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್ ನಿಂದ 82 ಸಾವಿರ ಕ್ಯೂಸೆಕ್ಸ್, ವೇದಗಂಗಾ, ದೂಧಗಂಗಾದಿಂದ 22 ಸಾವಿರ ಕ್ಯೂಸೆಕ್ ನೀರು ಬಂದು ಕೃಷ್ಣಾ ನದಿಗೆ ಸೇರುತ್ತಿದೆ.
ಪರಿಣಾಮ ಕೃಷ್ಣಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನಿಪ್ಪಾಣಿ, ಚಿಕ್ಕೋಡಿ,ರಾಯಭಾಗ, ಕಾಗವಾಡ ತಾಲೂಕಿನಲ್ಲಿ ಒಟ್ಟು 10 ಕೆಳ ಹಂತದ ಸೇತುವೆಗಳು ಜಲಾವೃತಗೊಂಡಿದೆ.

ಈ ಸೇತುವೆಗಳಲ್ಲಿ ಸಂಚಾರ ಸಂಪೂರ್ಣ ಸ್ಥಗಿತ ಗೊಂಡಿದೆ. ಜನರು ಪರ್ಯಾಯ ಮಾರ್ಗದಿಂದ ಸಂಚಾರ ನಡೆಸುತ್ತಿದ್ದಾರೆ.
ಸಂಭಾವ್ಯ ಪ್ರವಾಹ ಪೀಡಿತ ಗ್ರಾಮಗಳಿಗೆ ಜಿಲ್ಲಾಧಿಕಾರಿ ಮತ್ತು ಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆ ನೀಡಿದೆ.








