PSI Scam | ಅಮ್ರಿತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ
ಬೆಂಗಳೂರು : ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧಿತರಾಗಿರುವ ನೇಮಕಾತಿ ವಿಭಾಗದ ಎ.ಡಿ.ಜಿ.ಪಿ ಯಾಗಿದ್ದ ಅಮ್ರಿತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಪಿಎಸ್ಐ ಅಕ್ರಮ ನೇಮಕಾತಿಯಲ್ಲಿ ಸಿದ್ದರಾಮಯ್ಯ ಪ್ರಮುಖ ಪಾತ್ರಧಾರಿ ಎಂಬ ಸಚಿವ ಅಶ್ವತ್ ನಾರಾಯಣ ಹೇಳಿಕೆಗೆ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ…
ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧಿತರಾಗಿರುವ ನೇಮಕಾತಿ ವಿಭಾಗದ ಎ.ಡಿ.ಜಿ.ಪಿ ಯಾಗಿದ್ದ ಅಮ್ರಿತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಯಾರೆಲ್ಲ ರಾಜಕಾರಣಿಗಳು ಇರದಲ್ಲಿ ಶಾಮೀಲಾಗಿದ್ದಾರೆ ಎಂಬುದು ಗೊತ್ತಾಗಲಿದೆ.
"ಉಪ್ಪು ತಿಂದವರು ನೀರು ಕುಡಿಯಲಿ".
1/2#PSIScam— Siddaramaiah (@siddaramaiah) July 14, 2022
ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧಿತರಾಗಿರುವ ನೇಮಕಾತಿ ವಿಭಾಗದ ಎ.ಡಿ.ಜಿ.ಪಿ ಯಾಗಿದ್ದ ಅಮ್ರಿತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಯಾರೆಲ್ಲ ರಾಜಕಾರಣಿಗಳು ಇರದಲ್ಲಿ ಶಾಮೀಲಾಗಿದ್ದಾರೆ ಎಂಬುದು ಗೊತ್ತಾಗಲಿದೆ. “ಉಪ್ಪು ತಿಂದವರು ನೀರು ಕುಡಿಯಲಿ”.
ಪಿಎಸ್‌ಐ ನೇಮಕಾತಿ ‘ಅಕ್ರಮದಲ್ಲಿ ಅನೇಕ ಸಚಿವರು, ಅವರ ಆಪ್ತರು ಶಾಮೀಲಾಗಿರುವ ಸಂದೇಹಗಳಿವೆ. ಈ ಬಗ್ಗೆ ಸ್ಪಷ್ಟ ಮಾಹಿತಿ ಹೊರಬೀಳಬೇಕು ಎಂದರೆ ಪ್ರಮುಖ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು & ಅಮ್ರಿತ್ ಪೌಲ್ ಬರೆದ ಡೈರಿಯ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕೆಂದು ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.