ಬೆಂಗಳೂರು, ಜೂನ್ 1: ಬೆಂಗಳೂರಿನಲ್ಲಿ ಕಿರುತೆರೆ ನಟಿ ಚಂದನಾ ಲೈವ್ ವೀಡಿಯೋ ಮಾಡುತ್ತಾ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮದುವೆಯಾಗುವುದಾಗಿ ನಂಬಿಸಿ ಪ್ರಿಯಕರ ಮೋಸ ಮಾಡಿದ್ದಾನೆ ಎಂದು ಸಾವಿಗೂ ಮುನ್ನ ಆಕೆ ಲೈವ್ ವಿಡಿಯೋದಲ್ಲಿ ಹೇಳಿದ್ದು, ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೇ 28ರಂದು ಬೆಂಗಳೂರಿನ ತಾವರೆಕೆರೆಯ ಕೃಷ್ಣಮೂರ್ತಿ ನಗರದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚಂದನಾ(29) ಸೀರಿಯಲ್ ಹಾಗೂ ಜಾಹಿರಾತುಗಳಲ್ಲಿ ನಟಿಸಿದ್ದು, ಐದು ವರ್ಷದಿಂದ ದಿನೇಶ್ ಎಂಬಾತನನ್ನು ಪ್ರೀತಿಸುತ್ತಿದ್ದರು. ಮದುವೆಗೆ ಎರಡು ಮನೆಯಲ್ಲೂ ಒಪ್ಪಿಗೆ ಕೂಡಾ ನೀಡಲಾಗಿತ್ತು.

ಲೈವ್ ವೀಡಿಯೋದಲ್ಲಿ ಪ್ರಿಯಕರ ದಿನೇಶ್ ಮದುವೆಯಾಗುವುದಾಗಿ ನಂಬಿಸಿ, ಮೋಸ ಮಾಡಿದ್ದರಿಂದಾಗಿ ಬೇಸರಗೊಂಡು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಹೇಳಿಕೊಂಡು ಚಂದನಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದಿನೇಶ್ ಮದುವೆಯಾಗುವುದಾಗಿ ನಂಬಿಸಿ, 5 ಲಕ್ಷ ಹಣ ಕೂಡ ಪಡೆದುಕೊಂಡಿದ್ದಲ್ಲದೇ ದೈಹಿಕವಾಗಿ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ. ಚಂದನ ಕುಟುಂಬಸ್ಥರು ದಿನೇಶ್ ಮದುವೆಯಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಚಂದನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ








