Chamarajanagar | ಎರಡು ಕೋಮಿನ ನಡುವೆ ಗಲಾಟೆ
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಆಲತ್ತೂರು ಗ್ರಾಮದಲ್ಲಿ ಎರಡು ಕೋಮಿನ ನಡುವೆ ಗಲಾಟೆ ನಡೆದಿದೆ.
ಶನಿವಾರ ರಾತ್ರಿ ಒಂದು ಕೋಮಿಗೆ ಸೇರಿದ ಕುಟುಂಬದ ಮೇಲೆ ಮನೆಯೊಳಗೆ ನುಗ್ಗಿ ಮತ್ತೊಂದು ಕೋಮಿನ ಜನರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಬೇಗೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆದ್ರೆ ಇಲ್ಲಿ ಹಲ್ಲೆ ಮಾಡಿದವರ ಮೇಲೆ ಹಾಗೇ ಹಲ್ಲೆಗೆ ಒಳಗಾದ ವ್ಯಕ್ತಿಯ ಮೇಲೂ ದೂರು ದಾಖಲಾಗಿದೆ.
ಹೀಗಾಗಿ ಇದನ್ನ ಖಂಡಿಸಿ, ಆಲತ್ತೂರು ಗ್ರಾಮದ ಒಂದು ಕೋಮಿನ ಮುಖಂಡರು ಪೋಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಈ ವೇಳೆ ಸ್ಥಳಕ್ಕೆ ಧಾವಿಸಿದ ಡಿವೈಎಸಪಿ ಪ್ರಿಯದರ್ಶಿನಿ ಸಾನೆಕೊಪ್ಪ ಎರಡು ಕೋಮಿನವರನ್ನು ಸಮಾಧಾನ ಪಡಿಸಲು ಮುಂದಾದರೂ ಪ್ರಯೋಜನವಾಗಿಲ್ಲ.
ನ್ಯಾಯ ಸಿಗುವವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತ ಈ ಘಟನೆಯಿಂದಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, 144 ಸೆಕ್ಷನ್ ಜಾರಿಯಾಗಿದೆ.








