Congress Protest: ಬೆಲೆ ಏರಿಕೆ ವಿರುದ್ಧ ಮುಂದುವರೆದ ಕಾಂಗ್ರೆಸ್ ಪ್ರತಿಭಟನೆ…
ಬೆಲೆ ಏರಿಕೆ ಮತ್ತು ಜಿಎಸ್‌ಟಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ ಮುಂದುವರೆದಿದೆ. ಹಣದುಬ್ಬರ ಮತ್ತು ಏರುತ್ತಿರುವ ಇಂಧನ ಬೆಲೆಗಳ ವಿರುದ್ಧ ಬುಧವಾರ ಸಂಸತ್ ಭವನದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಈ ವೇಳೆ ಮಹಿಳಾ ಸಂಸದೆಯೊಬ್ಬರು ಬಾಹುಬಲಿ ಶೈಲಿಯಲ್ಲಿ ಗ್ಯಾಸ್ ಸಿಲಿಂಡರ್ ಹಿಡಿದು ಪ್ರತಿಭಟನೆ ನಡೆಸುತ್ತಿರುವುದು ಕಂಡುಬಂತು. ಜಿಎಸ್‌ಟಿ ಕುರಿತು ಕೇಂದ್ರ ಸರ್ಕಾರ ಇತ್ತೀಚೆಗೆ ಕೈಗೊಂಡಿರುವ ನಿರ್ಧಾರದ ಬಗ್ಗೆಯೂ ಮಹಿಳಾ ಸಂಸದರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಂದು, ರಾಹುಲ್ ಗಾಂಧಿ ನೇತೃತ್ವದಲ್ಲಿ, ಕಾಂಗ್ರೆಸ್ ಮತ್ತು ಇತರ ಕೆಲವು ವಿರೋಧ ಪಕ್ಷಗಳ ಸಂಸದರು ಸಂಸತ್ತಿನ ಆವರಣದಲ್ಲಿ ಧರಣಿ ನಡೆಸಿದರು. ಪ್ರತಿಪಕ್ಷದ ಹಲವು ನಾಯಕರು ಹಣದುಬ್ಬರ ಮತ್ತು ದೈನಂದಿನ ವಸ್ತುಗಳ ಜಿಎಸ್‌ಟಿ ವಿಚಾರವಾಗಿ ಸಂಸತ್ತಿನ ಮಹಾತ್ಮ ಗಾಂಧಿ ಪ್ರತಿಮೆ ಎದುರು ಜಂಟಿಯಾಗಿ ಪ್ರತಿಭಟನೆ ನಡೆಸಿದರು. ‘
ಜನಪ್ರತಿನಿಧಿಯಾಗಿ ಇಂತಹ ವಿಚಾರಗಳನ್ನು ಪ್ರಸ್ತಾಪಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಬಿಜೆಪಿ ಸರ್ಕಾರ 140 ಕೋಟಿ ಜನರ ಮೇಲೆ ದಾಳಿ ಮಾಡಿದೆ. ಅದಕ್ಕಾಗಿಯೇ ನಾವು ಪ್ರತಿಭಟನೆ ಮಾಡುತ್ತಿದ್ದೇವೆ, ಎಲ್ಲಾ ರಾಜ್ಯಗಳಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.