KGF: Chapter 2 – Zee ವಾಹಿನಿಯಲ್ಲಿ ಅಬ್ಬರಿಸಲು ಬರುತ್ತಿದೆ ಕೆಜಿಎಫ್ 2
ಕನ್ನಡ ಮತ್ತು ಭಾರತೀಯ ಚಿತ್ರರಂಗದ ಈ ವರ್ಷದ ಅತ್ಯಂತ ಯಶಸ್ವಿ ಚಿತ್ರ ಕೆಜಿಎಫ್ ಚಾಪ್ಟರ್ 2 ರಾಕಿಂಗ್ ಸ್ಟಾರ್ ಯಶ್ ಅಭಿನಯದ ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್: ಚಾಪ್ಟರ್ 2’ (KGF: Chapter 2). ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಯಿ ಮಾಡಿದ ಬಳಿಕ ಕಿರುತೆರೆಗೆ ಬರಲು ಸಜ್ಜಾಗುತ್ತಿದೆ. ಜೀ ಕನ್ನಡ ವಾಹಿನಿಯಲ್ಲಿ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಪ್ರಸಾರವಾಗಲಿದೆ. ಈ ಬಗ್ಗೆ ಜೀ ಕನ್ನಡ ವಾಹಿನಿ ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತವಾಗಿ ಘೋಷಿಸಿದೆ.
’ಪ್ರಪಂಚದಲ್ಲಿರುವ ಬಂಗಾರನೆಲ್ಲ ಅಮ್ಮನಿಗೆ ತಂದುಕೊಡೋ ಧೀರ ಸುಲ್ತಾನ ನಿಮ್ಮನೆ ಪರದೆಯಲ್ಲೂ ಬರ್ತಿದ್ದಾನೆ! ಕೆಜಿಎಫ್ ಚಾಪ್ಟರ್ 2 ಸಿನಿಮಾ ಅತೀ ಶೀಘ್ರದಲ್ಲಿ’’ ಎಂದು ಜೀ ವಾಹಿನಿ ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದೆ. ಆದರೆ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದ ಪ್ರಸಾರ ದಿನಾಂಕ ಹಾಗೂ ಸಮಯದ ಬಗ್ಗೆ ಮಾಹಿತಿ ಇನ್ನೂ ಹೊರಬಂದಿಲ್ಲ.
ಕೆಜಿಎಫ್: ಚಾಪ್ಟರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲೂ ಭರ್ಜರಿ ಕಲೆಕ್ಷನ್ ಮಾಡಿತ್ತು. ಒಟ್ಟಾರೆಯಾಗಿ 1250 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಸ್ಯಾಂಡಲ್‌ವುಡ್ ಪಾಲಿಗೆ ಹೊಸ ಇತಿಹಾಸ ಸೃಷ್ಟಿಸಿತ್ತು. ಇಡೀ ಭಾರತದಲ್ಲಿ ಅತಿ ಹೆಚ್ಚು ಸಾರ್ವಕಾಲಿಕ ಕಲೆಕ್ಷನ್ ಮಾಡಿದ ಚಿತ್ರಗಳ ಪೈಕಿ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಮೂರನೇ ಸ್ಥಾನ ಪಡೆದಿದೆ.








