ಕಾರ್ಮಿಕರ ಶೆಡ್ ಮೇಲೆ ಕುಸಿದ ಗೋಡೆ – ನಾಲ್ವರು ಕಾರ್ಮಿಕರ ಸಾವು
ರಾತ್ರಿ ಸುರಿದ ಭಾರಿ ಮಳೆಗೆ ಕೂಲಿ ಕಾರ್ಮಿಕರು ತಂಗಿದ್ದ ಶೆಡ್ ಮೇಲೆ ಗೋಡೆ ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಸೌಖ್ಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಸೌಪರ್ಣಿಕಾ ಅಪಾರ್ಟ್ಮೆಂಟ್ ಬಳಿ ಕೂಲಿ ಕಾರ್ಮಿಕರು ತಂಗಲು ತಾತ್ಕಾಲಿಕ ಶೆಡ್ ನಿರ್ಮಿಸಲಾಗಿತ್ತು. ಬೆಳಿಗಿನ ಜಾವದಲ್ಲಿ ಸುಮಾರು 3.00 ಗಂಟೆಯ ಸಮಯದಲ್ಲಿ ರಾತ್ರಿ ಸುರಿದ ಮಳೆಯಿಂದಾಗಿ ಶೆಡ್ ಕುಸಿದು ಬಿದ್ದ ಪರಿಣಾಮ ಉತ್ತರ ಭಾರತ ಮೂಲದ ನಾಲ್ವರು ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ.
ಬಹುಕಟ್ಟಡ ನಿರ್ಮಾಣದ ಹಂತದಲ್ಲಿದ್ದು ಕೂಲಿ ಕಾರ್ಮಿಕರಿಗಾಗಿ ನಿರ್ಮಿಸಿದ್ದ ಶೆಡ್ ಮೇಲೆ ಪಕ್ಕದ ಹುಡಾನ್ ಕಂಪನಿಯ ವೇರ್ ಹೌಸ್ ನ ಗೊಡೆ ಬಿದ್ದಿದೆ. ಮೃತರನ್ನ ಬಿಹಾರ ಮೂಲದ ಮನೋಜ್ ಕುಮಾರ್ ಸದಯ್ 35 ವರ್ಷ, ರಾಮ್ ಕುಮಾರ್ ಸದಯ್ 25 ವರ್ಷ, ನಿತೀಶ್ ಕುಮಾರ್ ಸದೆಯ 22 ವರ್ಷ ಎಂದು ಗುರುತಿಸಲಾಗಿದೆ.
ಗಾಯಾಳುಗಳುಗಳನ್ನ ವೈಟ್ ಪೀಲ್ಡ್ ನ ವೈದೇಹಿ ಅಸ್ವತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೊಸಕೋಟೆ ಡಿವೈಎಸ್ಪಿ ಉಮಾಶಂಕರ್ ಹಾಗೂ ತಿರುಮಲಶೆಟ್ಟಿಹಳ್ಳಿ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








