ದ್ರೌಪದಿ ಮುರ್ಮು ಭವ್ಯ ಭಾರತದ 15ನೇ ರಾಷ್ಟ್ರಪತಿ…
ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದು ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಬುಡಕಟ್ಟು ಮಹಿಳೆಯೊಬ್ಬರು ದೇಶದ ಅತ್ಯುನ್ನತ ಹುದ್ದೆಗೇರಿದ ಕೀರ್ತಿಗೆ ಪಾತ್ರರಾಗಲಿದ್ದಾರೆ.
ನಿನ್ನೆ ನಡೆದ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆಯಲ್ಲಿ ದ್ರೌಪದಿ ಮುರ್ಮು ಅವರು ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ ಗೆಲುವು ಸಾಧಿಸಿದ್ದಾರೆ. ದ್ರೌಪದಿ ಮುರ್ಮು ಅವರಿಗೆ 5,121 ಮತಗಳು ಬಿದ್ದಿವೆ. ಈ ಮತಗಳ ಒಟ್ಟು ಮೌಲ್ಯ 5,77,777 ಆಗಿದೆ. ಇನ್ನು ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗೆ 1,058 ಮತಗಳು ಬಿದ್ದಿದ್ದು ಇದರ ಮೌಲ್ಯ 2,61,062 ಆಗಿದೆ.
ಈ ಅಧ್ಯಕ್ಷೀಯ ಚುನಾವಣೆಯಲ್ಲಿ ಪ್ರತಿ ಸಂಸದರು 700 ಮತಗಳ ಮೌಲ್ಯವನ್ನು ಹೊಂದಿದೆ.
ಎಲ್ಲರ ನಿರೀಕ್ಷೆಯಂತೆ ಕೊನೆಗೂ ಭಾರತದ 15ನೇ ರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ಕಂಡಿದ್ದು, ಜುಲೈ 25 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳಲಿದೆ. ದ್ರೌಪದಿ ಮುರ್ಮು ಅವರು ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಬುಡಕಟ್ಟು ವ್ಯಕ್ತಿಯಾಗಿದ್ದಾರೆ.







