ಪಾಟ್ನಾ – ದೆಹಲಿ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ – ಓರ್ವ ಬಂಧನ..
ಪಟ್ನಾದಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲಿದ್ದ ಪ್ರಯಾಣಿಕ ತನ್ನ ಬ್ಯಾಗ್‌ನಲ್ಲಿ ಬಾಂಬ್ ಇದೆ ಹೇಳಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ಅಂದರೆ ಗುರುವಾರ ಇಂಡಿಗೋ ವಿಮಾನ (ಸಂಖ್ಯೆ 6ಇ 2126) ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ನಡೆದಿದೆ.
ತನ್ನ ಲಗೇಜಿನಲ್ಲಿ ಬಾಂಬ್ ಇದೆ ಎಂದು ವ್ಯಕ್ತಿಯೊಬ್ಬರು ಹೇಳಿಕೊಂಡ ಹಿನ್ನೆಲೆಯಲ್ಲಿ ಸ್ಥಳದಲ್ಲಿದ್ದ ಬಾಂಬ್ ಸ್ಕ್ವಾಡ್ ಮತ್ತು ಪೊಲೀಸರು ಪರಿಶೀಲನೆ ನಡೆಸಿದರು. ಆತನ ಬ್ಯಾಗನ್ನು ಕೂಲಂಕಷವಾಗಿ ಪರಿಶೀಲಿಸಿದರೂ ಬಾಂಬ್ ಪತ್ತೆಯಾಗಲಿಲ್ಲ. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಸ್ಪಷ್ಟಗೊಂಡಿದೆ. ಪ್ರಯಾಣಿಕನನ್ನು ವಶಕ್ಕೆ ಪಡೆಯಲಾಗಿದ್ದು, ವಿಮಾನವನ್ನು ಮತ್ತಷ್ಟು ತಪಾಸಣೆ ನಡೆಸಲಾಗಿದೆ.
ಎಲ್ಲಾ ಪ್ರಯಾಣಿಕರನ್ನು ಪಾಟ್ನಾ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ಹೆಚ್ಚಿನ ಮಾಹಿತಿ ಬರಬೇಕಿದೆ.
Delhi-bound IndiGo flight grounded at Patna airport after bomb threat, passenger detained








