ಬೀಜಿಂಗ್, ಜೂನ್ 2 : ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೊ ಲಿಜಿಯಾನ್ ಅವರು ಲಡಾಖ್ ಬಿಕ್ಕಟ್ಟಿನ ವಿಷಯದಲ್ಲಿ ಭಾರತದ ಘನತೆಗೆ ಧಕ್ಕೆಯನ್ನುಂಟು ಮಾಡುವುದಿಲ್ಲ ಎಂದು ಹೇಳಿದ್ದಾರೆ. ಉದ್ಭವಿಸಿರುವ ಬಿಕ್ಕಟ್ಟನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಉಭಯ ರಾಷ್ಟ್ರಗಳು ರಾಜತಾಂತ್ರಿಕ ಮತ್ತು ಮಿಲಿಟರಿ ಮಟ್ಟದ ಮಾತುಕತೆಯನ್ನು ಮುಂದುವರಿದಿದ್ದು, ಬಿಕ್ಕಟ್ಟು ಉಂಟಾಗಿರುವ ಲಡಾಖ್ ನ ವಾಸ್ತವ ಗಡಿರೇಖೆಯ ಬಳಿ ಪರಿಸ್ಥಿತಿ ಸ್ಥಿರವಾಗಿದ್ದು ನಿಯಂತ್ರಣದಲ್ಲಿದೆ ಮತ್ತು ಆದಷ್ಟು ಬೇಗನೆ ಸಮಸ್ಯೆ ಬಗೆಹರಿಯಲಿದೆ ಎಂದು ಭರವಸೆ ವ್ಯಕ್ತಪಡಿಸಿದರು ಸೋಮವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಲಡಾಖ್ ಬಿಕ್ಕಟ್ಟಿನ ವಿಷಯದಲ್ಲಿ ಭಾರತದ ಘನತೆಯೊಂದಿಗೆ ರಾಜೀ ಮಾಡಿಕೊಳ್ಳುವ ಮಾತೇ ಇಲ್ಲ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಚೀನಾದ ಈ ಪ್ರತಿಕ್ರಿಯೆ ಬಂದಿದೆ. ಚೀನಾ ವಾಸ್ತವ ಗಡಿ ರೇಖೆ ಬಳಿಯ ಗಲ್ವಾನ್ ಕಣಿವೆಯ ಮೂರು ಕಡೆ ಮತ್ತು ಪ್ಯಾಂಗಾಂಗ್ ತ್ಸೊ ಸರೋವರದ ಬಳಿ 6 ಸಾವಿರಕ್ಕೂ ಹೆಚ್ಚು ಯೋಧರನ್ನು ನಿಯೋಜಿಸಿದ್ದು, ಭಾರಿ ಪ್ರಮಾಣದ ಯುದ್ಧೋಪಕರಣಗಳನ್ನು ಜಮಾವಣೆ ಮಾಡಿದೆ. ಇದಕ್ಕೆ ಉತ್ತರವಾಗಿ ಭಾರತ ಕೂಡ ತನ್ನ ಸೈನಿಕರನ್ನು ಹೆಚ್ಚಿನ ಪ್ರಮಾಣದಲ್ಲಿ ಗಡಿರೇಖೆ ಬಳಿ ನಿಯೋಜನೆ ಮಾಡಿದೆ.
ಕಾರ್ಮಿಕರ ಬವಣೆ ಆಲಿಸಿದ CM ಡಿಕೆ ಶಿವಕುಮಾರ್ ಶೈಲಿಗೆ ಹೈಕೋರ್ಟ್ ಫಿದಾ: ಡಿಕೆಶಿ ಎಪಿಎಂಸಿ ಭೇಟಿ ಗಿಮಿಕ್ ಅಲ್ಲ ಇದು ಗ್ರೇಟ್ ಜಾಬ್
ಬೆಂಗಳೂರು: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇತ್ತೀಚೆಗೆ ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ನೀಡಿದ ಅನಿರೀಕ್ಷಿತ ಭೇಟಿ ಮತ್ತು ಅಲ್ಲಿನ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿದ ರೀತಿ ಈಗ...








