CBSE 12th Result – ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಬಿಡುಗಡೆ..
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSC) 12 ನೇ ತರಗತಿಯ ಫಲಿತಾಂಶಗಳನ್ನ ಪ್ರಕಟಗೊಳಿಸಿದೆ. ಶೇಕಡಾ 92.71 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಫಲಿತಾಂಶದ ವಿವರಗಳು ಶೀಘ್ರದಲ್ಲಿಯೇ cbseresults.nic.in ಮತ್ತು results.cbse.nic.in ವೆಬ್ಸೈಟ್ನಲ್ಲಿ ಲಭ್ಯವಾಗಲಿವೆ. ಫಲಿತಾಂಶದ ವಿವರಗಳನ್ನು ವಿದ್ಯಾರ್ಥಿಗಳು ಮಂಡಳಿಯ ವೆಬ್ಸೈಟ್ಗಳಿಂದ ನೇರವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು.
ಪ್ರಸಕ್ತ ಸಾಲಿನಲ್ಲಿ ಒಟ್ಟು 14,44,341 ಮಂದಿ ಪರೀಕ್ಷೆಗಾಗಿ ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 14,35,366 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. 13,30,662 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. 33 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೇಕಡಾ 95 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ ಮತ್ತು 1.34 ಲಕ್ಷ ವಿದ್ಯಾರ್ಥಿಗಳು ಶೇಕಡಾ 90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ ಎಂದು ಸಿ ಬಿ ಎಸ್ ಸಿ ಮಂಡಳಿ ತಿಳಿಸಿದೆ.
ತಿರುವನಂತಪುರ ವಲಯವು ಶೇ 98.83ರ ಫಲಿತಾಂಶದೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಪ್ರಯಾಗ್ರಾಜ್ ವಲಯವು ಶೇ 83.71ರ ಫಲಿತಾಂಶದೊಂದಿಗೆ ಕೊನೆಯ ಸ್ಥಾನ ಪಡೆದಿದೆ. CBSE 12th Result – CBSE class 12 results declared