ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂತಹ ಕಠಿಣ ಸಮಯದಲ್ಲಿ ಹೆತ್ತವರನ್ನು ಚೆನ್ನಾಗಿ ನೋಡಿಕೊಳ್ಳಿ – ಸಚಿನ್ ಸಂದೇಶ…

admin by admin
June 2, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಸಚಿನ್ ತೆಂಡುಲ್ಕರ್… ಟೀಮ್ ಇಂಡಿಯಾದ ಮಾಜಿ ಆಟಗಾರ. ವಿಶ್ವ ಕ್ರಿಕೆಟ್ ನಲ್ಲಿ ಮಾಡಿರುವ ಸಾಧನೆ, ದಾಖಲೆಗಳು ಎಂದೆಂದಿಗೂ ನೆನಪಿನ ಪುಟದಲ್ಲಿರುತ್ತವೆ. ಅಂತಹ ಸಚಿನ್ ಔಟಾಗಲಿ, ಶತಕವನ್ನೇ ಸಿಡಿಸಲಿ.. ಅವರ ಆಟವನ್ನು ನೋಡುವುದೇ ಚೆಂದ. ಹಾಗೇ ಅವರ ಮಾತು ಕೂಡ. ಯಾಕಂದ್ರೆ ಅವರು ಆಡುತ್ತಿದ್ದ ಆಟದಂತೆ ಅವರ ಹೇಳುತ್ತಿರುವ ಪ್ರತಿ ಪದಗಳಿಗೂ ಒಂದು ತೂಕವಿರುತ್ತೆ.

ಸಚಿನ್ ಆಟ ಎಷ್ಟು ಸ್ಪೂರ್ತಿ, ಪ್ರೇರಣೆಯಾಗುತ್ತೋ ಅದೇ ರೀತಿ ಅವರು ಹೇಳುವ ಮಾತಿನಲ್ಲೂ ಅಷ್ಟೊಂದು ಪ್ರಬುದ್ಧತೆ ಇರುತ್ತೆ.  ಕ್ರಿಕೆಟ್‍ಗೆ ವಿದಾಯ ಹೇಳಿದ ನಂತರ ಸಚಿನ್ ತನ್ನ ಕುಟುಂಬದ ಜೊತೆ ಕಾಲ ಕಳೆಯುತ್ತಾ, ಕ್ರಿಕೆಟ್‍ನ ಇನ್ನಿತರ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅದೇ ರೀತಿ ಸಾಮಾಜಿಕ ಜಾಲ ತಾಣದಲ್ಲೂ ಬಿಝಿಯಾಗಿರುತ್ತಾರೆ. ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಸಚಿನ್ ತಮ್ಮ ಅಭಿಮಾನಿಗಳಿಗೆ ಪ್ರತಿ ದಿನ ಒಂದಲ್ಲ ಒಂದು ರೀತಿಯಲ್ಲಿ ಪ್ರೇರಣೆಯಾಗುತ್ತಿದ್ದಾರೆ.

Related posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

August 8, 2026
ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

August 8, 2026

ಅದ್ರಲ್ಲೂ ಲಾಕ್ ಡೌನ್ ಟೈಮ್ ನಲ್ಲಿ ಅಡುಗೆ ಮಾಡಿಕೊಂಡು. ಚಾರಿಟಿ ವರ್ಕ್ ಮಾಡ್ಕೊಂಡು, ಮಗನ ಹೇರ್ ಕಟ್ ಮಾಡ್ಕೊಂಡು ಗಮನ ಸೆಳೆದಿದ್ದಾರೆ. ಅದೇ ರೀತಿ ಕೆಲವೊಂದು ಅವಿಸ್ಮರಣೀಯ ಪಂದ್ಯಗಳನ್ನು ನೆನಪು ಮಾಡಿಕೊಂಡಿದ್ರು. ಅಷ್ಟೇ ಅಲ್ಲ, ತಮ್ಮ ಒಡನಾಡಿಗಳ ಸವಾಲಿಗೂ ಪ್ರತ್ಯುತ್ತರ ನೀಡುತ್ತಾ ಕಾಲ ಕಳೆಯುತ್ತಿದ್ದಾರೆ. ಇದೀಗ ಅಪ್ಪ – ಅಮ್ಮನನ್ನು ಹೇಗೆ ನೋಡಿಕೊಳ್ಳಬೇಕು ಎಂಬುದುರ ಬಗ್ಗೆ ಅರ್ಥಪೂರ್ಣ ಸಂದೇಶವನ್ನು ತನ್ನ ಸಾಮಾಜಿಕ ಜಾಲ ತಾಣದಲ್ಲಿ ಹಾಕೊಂಡಿದ್ದಾರೆ. ಅಲ್ಲದೆ ಒಂದು ಹಳೆಯ ಫೋಟೋ ಹಾಕೊಂಡಿದ್ದಾರೆ.

ಹೌದು, ಇದು ಹಳೆಯ ಫೋಟೋ. ಕಪ್ಪು-ಬಿಳುಪು ಫೋಟೋ. ಆದ್ರೆ ಈ ಫೋಟೋ ಮಾತ್ರ ಭಾವನೆಗಳನ್ನು ತುಂಬಿಕೊಂಡಿದೆ. ಈ ಚಿತ್ರವನ್ನು ನೋಡಿ ವರ್ಣಿಸಲು ಅಥವಾ ವಿಮರ್ಷೆ ಮಾಡಲು ಪದಗಳಿಂದ ಸಾಧ್ಯವಿಲ್ಲ. ಯಾಕಂದ್ರೆ ಒಬ್ಬ ಮಗನಿಗೆ ಅಪ್ಪ -ಅಮ್ಮನಿಂದ ಸಿಗುವಂತಹ ಪ್ರೀತಿ, ಮಮಕಾರ, ಸಲುಗೆ ಹೀಗೆ ಪ್ರತಿಯೊಂದು ಅಂಶಗಳನ್ನು ಈ ಒಂದು ಫೋಟೋದಿಂದ ಸಾಧ್ಯ.  ಅಷ್ಟಕ್ಕೂ ಈ ಫೋಟೋದಲ್ಲಿ ಏನಿದೆ. ಬಹುಶಃ ಸಚಿನ್ ಯಾವ ವಯಸ್ಸಿನಲ್ಲಿ ತೆಗೆದ ಫೋಟೋ ಅಂತ ಗೊತ್ತಿಲ್ಲ. ತಾಯಿಯ ಮಡಿಲಲ್ಲಿ ತಲೆಯನ್ನಿಟ್ಟು, ಅಪ್ಪನ ತೊಡೆಯ ಮೇಲೆ ಕಾಲನ್ನು ಇಟ್ಟು ಚಿಕ್ಕ ಮಗುವಿನಂತೆ ಮಲಗಿಕೊಂಡಿರುವ ಫೋಟೋ. ಅಪ್ಪ-ಅಮ್ಮನಷ್ಟು ಬೆಳೆದು ಎತ್ತರವಾಗಿದ್ರೂ ಅಪ್ಪ-ಅಮ್ಮನಿಗೆ ಇನ್ನೂ ಚಿಕ್ಕ ಮಗುವೇ ಎಂಬಂತೆಯೂ ಭಾಸವಾಗುತ್ತಿದೆ.

ಇನ್ನು ಈ ಫೋಟೋದ ಟ್ಯಾಗ್ ಲೈನ್ ಸಚಿನ್ ತೆಂಡುಲ್ಕರ್ ಸಂದೇಶ ಹೀಗಿದೆ. ನಮ್ಮ ತಂದೆ ತಾಯಿಯ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಮ್ಮ ಏಳಿಗೆಯ ಪ್ರತಿ ಹಂತದಲ್ಲೂ ಅವರ ಬೆಂಬಲವಿರುತ್ತದೆ. ಒಬ್ಬ ವ್ಯಕ್ತಿಯನ್ನಾಗಿ ರೂಪಿಸಲು ನಮಗೆ ಭದ್ರ ಅಡಿಪಾಯ ಹಾಕಿಕೊಡುತ್ತಾರೆ. ಹಾಗೇ ನನ್ನ ಬದುಕು ಕೂಡ. ಇವತ್ತೂ ನಾನು ಏನು ಆಗಿದ್ದೇನೋ ಅದಕ್ಕೆ ನನ್ನ ಹೆತ್ತವರೇ ಕಾರಣ ಅವರ ಬೆಂಬಲ, ಪ್ರೀತಿ, ಪ್ರೋತ್ಸಾಹ ಇಲ್ಲದಿದ್ರೆ ನಾನು ಈ ಮಟ್ಟಕ್ಕೆ ಬೆಳೆಯಲು ಆಗುತ್ತಿರಲಿಲ್ಲ ಎಂಬ ಅರ್ಥದಲ್ಲಿ ಸಚಿನ್ ಹೇಳಿದ್ದಾರೆ.

ಅಷ್ಟೇ ಅಲ್ಲ, ನಾವು ಇಂದಿನ ಕಠಿಣ ಸಮಯದಲ್ಲಿ ನಮ್ಮ ಹೆತ್ತವರನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಇದು ನಮ್ಮ ಜವಾಬ್ದಾರಿ ಕೂಡ. ಅವರನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಯಾಕಂದ್ರೆ ನಾವು ಸಂದಿಗ್ದ ಸಮಯದಲ್ಲಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಸಚಿನ್ ತೆಂಡುಲ್ಕರ್ ತಾಯಿ ಈಗ ಇದ್ದಾರೆ. 1999 ವಿಶ್ವಕಪ್ ವೇಳೆ ಸಚಿನ್ ತೆಂಡುಲ್ಕರ್ ಅವರು ತಮ್ಮ ತಂದೆಯನ್ನು ಕಳೆದುಕೊಂಡಿದ್ದರು. ತಂದೆಯ ಕಾರ್ಯವನ್ನು ಮುಗಿಸಿ ಮತ್ತೆ ವಿಶ್ವಕಪ್ ನಲ್ಲಿ ಸಚಿನ್ ಆಡಿದ್ದರು.

ಅಲ್ಲದೆ ಸಚಿನ್ ತೆಂಡುಲ್ಕರ್ ಅವರ ಕ್ರಿಕೆಟ್ ಆಟಕ್ಕೆ ತಂದೆ ರಮೇಶ್ ತೆಂಡುಲ್ಕರ್ ತುಂಬಾನೇ ಪ್ರೋತ್ಸಾಹ ನೀಡಿದ್ದರು. ಅದೇ ರೀತಿ ತಾಯಿ ಕೂಡ. ನೆನಪಿರಬಹುದು. ಬಹುಶಃ ಸಚಿನ್ ಆಟವನ್ನು ಮೊದಲ ಬಾರಿ ಅವರ ತಾಯಿ ನೋಡಿದ್ದು ಸಚಿನ್ ತೆಂಡುಲ್ಕರ್ ಅವರ ಕೊನೆಯ ಟೆಸ್ಟ್ ಪಂದ್ಯದಲ್ಲಿ ಅಂತ ಕಾಣುತ್ತೆ. ಮಗ ವಿದಾಯದ ಮಾತುಗಳನ್ನು ಹೇಳಿದ್ದಾಗ ಸಚಿನ್ ತಾಯಿ ಕಣ್ಣಲ್ಲಿ ನೀರು ತುಂಬಿಕೊಂಡಿತ್ತು,

Tags: Sachin Tendulkar
ShareTweetSendShare
Join us on:

Related Posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

by Shwetha
August 8, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಡಶಾಲೆಯಲ್ಲಿ ಬಂಡಾಯದ ಬೇಗುದಿ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನ ಹಿರಿಯ ಶಾಸಕ...

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

by Shwetha
August 8, 2026
0

ಮುಂಬೈ: ಮೀಸಲಾತಿ ಎನ್ನುವುದು ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಇರುವ ವ್ಯವಸ್ಥೆಯೇ ಹೊರತು ಅದು ಶಾಶ್ವತವಲ್ಲ. ಈಗಾಗಲೇ ಮೀಸಲಾತಿ ಲಾಭ ಪಡೆದು ಸಮಾಜದಲ್ಲಿ ಸಬಲರಾಗಿರುವವರು ಸ್ವಯಂಪ್ರೇರಣೆಯಿಂದ ಮೀಸಲಾತಿ ಸೌಲಭ್ಯವನ್ನು...

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

by Shwetha
August 8, 2026
0

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮರುಪರಿಶೀಲನೆ (SIR) ಪ್ರಕ್ರಿಯೆ ವೇಳೆ, ತಮ್ಮ ಮಾಹಿತಿ ಮತ್ತು ದಾಖಲೆಗಳನ್ನು ದೃಢೀಕರಿಸದ ಮತದಾರರ ಹೆಸರುಗಳು ಅಂತಿಮ ಮತದಾರರ ಪಟ್ಟಿಯಿಂದ ಕೈಬಿಡುವ...

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

by Shwetha
August 8, 2026
0

ಬೆಂಗಳೂರು: ದೇಶದ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ಅನುಸರಿಸಿದ ಹಾದಿ...

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

by Shwetha
August 8, 2026
0

ಭಾರತವು ಹಿಂದೂ ರಾಷ್ಟ್ರವಾಗಬಾರದು ಎಂಬ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಹಾಗೂ ತೀವ್ರ ವಾಕ್ಸಮರಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram