ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.. ಗುಂಪು ಕಟ್ಟಿಕೊಂಡು ಸಾರ್ವಜನಿಕ ಆಸ್ತಿ-ಪಾಸ್ತಿ ನಾಶ ಮಾಡಿರುವ ಆರೋಪದಡಿ ಪೊಲೀಸರು ಸಂಸದ ತೇಜಸ್ವಿ ಸೂರ್ಯ ಸೇರಿದಂತೆ 30 ಬಿಜೆಪಿ ಕಾರ್ಯಕರ್ತರ ವಿರುದ್ಧ ದೆಹಲಿ ಪೊಲೀಸರು ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ. ಸಾವಿರ ಪುಟಗಳ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ..
ಪ್ರತಿಭಟನೆ ಹೆಸರಿನಲ್ಲಿ ಮುಖ್ಯಮಂತ್ರಿ ನಿವಾಸಕ್ಕೆ ಅಕ್ರಮ ಪ್ರವೇಶಕ್ಕೆ ಪ್ರಯತ್ನಪಡಲಾಗಿದೆ , ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಲಾಗಿದೆ ಎಂಬುದೂ ಸೇರಿದಂತೆ ಅನೇಕ ಆರೋಪಗಳನ್ನ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ..
ಕಾಶ್ಮೀರಿ ಫೈಲ್ಸ್ ಸಿನಿಮಾಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ನೀಡಿದ ಹೇಳಿಕೆಯನ್ನು ಖಂಡಿಸಿ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆ ಹೆಸರಿನಲ್ಲಿ ಅರವಿಂದ್ ಕೇಜ್ರಿವಾಲ್ ನಿವಾಸದೊಳಗೆ ಅಕ್ರಮ ಪ್ರವೇಶಕ್ಕೆ ಪ್ರಯತ್ನಪಟ್ಟ ಪ್ರತಿಭಟನಾಕಾರರು ಬ್ಯಾರಿಕೇಡ್ ಕೆಡವಿ ಗಲಭೆ ಎಬ್ಬಿಸಿದ್ದರು. ಇದೇ ವಿಚಾರವಾಗಿ ಅನೇಕ ಆರೋಪಗಳನ್ನ ಹೊರಿಸಿ ಚಾರ್ಜ್ ಶೀಟ್ ಸಲ್ಲಲಿಸಲಾಗಿದೆ.








