World athletics championship 2022 : ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ
ವಾಷಿಂಗ್ಟನ್ : ಅಮೆರಿಕಾದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್ ಶಿಪ್ ನ ಪುರುಷರ ಜಾವೆಲಿನ್ ಥ್ರೋನಲ್ಲಿ ಭಾರತದ ನೀರಜ್ ಚೋಪ್ರಾ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.
ಆ ಮೂಲಕ ಭಾರತಕ್ಕೆ ಮೊದಲ ಪದಕ ತಂದು ಕೊಟ್ಟಿದ್ದಾರೆ.
ಪುರುಷರ ಜಾವೆಲಿನ್ ಥ್ರೋನ ಫೈನಲ್ ನಲ್ಲಿ ನೀರಜ್ ಚೋಪ್ರಾ 88.13 ಮೀ ದೂರ ಎಸೆದು ಬೆಳ್ಳಿ ಪದಕ ಗೆದ್ದಿದ್ದಾರೆ.

ಈ ಮೂಲಕ 19 ವರ್ಷಗಳ ಬಳಿಕ ಭಾರತಕ್ಕೆ ಮತ್ತೊಂದು ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್ಶಿಪ್ ಪದಕ ತಂದುಕೊಟ್ಟು ಇತಿಹಾಸ ನಿರ್ಮಿಸಿದ್ದಾರೆ.
ಅಂದಹಾಗೆ ಫೈನಲ್ ನಲ್ಲಿ ನೀರಜ್ ಚೋಪ್ರಾ ಮೊದಲ ಎಸೆತ ಫೌಲ್ ಆಯಿತು.
ಎರಡನೇ ಎಸೆತ 82.39 ಮೀ., ಮೂರನೇ ಎಸೆತ 86.37 ಮೀ. ಮತ್ತು ನಾಲ್ಕನೇ ಎಸೆತ 88.13 ಎಸೆದು ಬೆಳ್ಳಿ ಪದಕ ಗೆದ್ದರು.
ಇನ್ನು ಗ್ರೆನಡಾದ ಆಂಡರ್ಸನ್ ಪೀಟರ್ಸ್ ಸತತ ಮೂರು ಎಸೆತಗಳನ್ನು 90+ ಮೀ. ಎಸೆದು ಚಿನ್ನದ ಪದಕಕ್ಕೆ ಮುತ್ತಿಕ್ಕಿದರೆ, ಜಾಕುಬ್ ವಡ್ಲೆಜ್ ಮೂರನೇ ಸ್ಥಾನ ಪಡೆದು ಕಂಚಿನ ಪದಕ ಪಡೆದರು.








