Droupadi Murdu – ನಾಳೆ ರಾಷ್ಟ್ರಪತಿಗಳಾಗಿ ದ್ರೌಪದಿಮುರ್ಮು ಪ್ರಮಾಣ ವಚನ…
ದ್ರೌಪದಿ ಮುರ್ಮು ಅವರು ಭಾರತದ ದೇಶದ ಹದಿನೈದನೇ ರಾಷ್ಟ್ರಪತಿಯಾಗಿ ಇದೇ ತಿಂಗಳ 25 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಗೃಹ ಸಚಿವಾಲಯ ತಿಳಿಸಿದೆ.
64 ವರ್ಷದ ಮುರ್ಮು ಅವರು ದೇಶದ ಅತ್ಯುನ್ನತ ಸಂವಿಧಾನಿಕ ಹುದ್ದೆಯನ್ನ ಅಲಂಕರಿಸಿದ ಭಾರತದ ಮೊದಲ ಬುಡಕಟ್ಟು ಮಹಿಳೆಯಾಗಿದ್ದಾರೆ. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಬೆಳಗ್ಗೆ 10.15ಕ್ಕೆ ರಾಷ್ಟ್ರಪತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.
ಈ ಪ್ರಕ್ರಿಯೆಯಲ್ಲಿ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ದ್ರೌಪದಿ ಮುರ್ಮು ಒಟ್ಟಿಗೆ ಸಂಸತ್ತಿಗೆ ಭೇಟಿ ನೀಡಿ ಆಗಮಿಸಲಿದ್ದಾರೆ. ಉಪರಾಷ್ಟ್ರಪತಿ, ರಾಜ್ಯಸಭಾ ಸಭಾಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜತಾಂತ್ರಿಕ ಕಚೇರಿಗಳ ರಾಯಭಾರಿಗಳು, ಸಂಸದರು, ಪ್ರಧಾನ ಸಿವಿಲ್ ಮತ್ತು ಮಿಲಿಟರಿ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.








