ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲೆ ಹೊಡೆದಾಡಿಕೊಂಡ ಕೈಕಾರ್ಯಕರ್ತರು…
ಕಾಂಗ್ರೆಸ್ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಎರಡು ದಿನಗಳಿಂದ ನಡೆದ ಘಟನೆ ಈಗ ಬೆಳಕಿಗೆ ಬಂದಿದೆ.
ಚುನಾವಣಾ ವರ್ಷದಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಕಿದ್ದ ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿರುವ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಜಿಲ್ಲಾ ಯೂಥ್ ಕಾಂಗ್ರೆಸ್ ಅಧ್ಯಕ್ಷ ಮತ್ತು ಕಾರ್ಯದರ್ಶಿ ನಿತೀಶ್ ಬೆಂಬಲಿಗರ ನಡುವೆ ಘರ್ಚಣೆ ನಡೆದಿದೆ.
Infighting between two groups of youth #Congress at #Chikkamagaluru #Karnataka. Over leadership issue fight ensued between supporters of Santosh and Nitish at the party office. pic.twitter.com/ppXBiZ8ZJa
— Imran Khan (@KeypadGuerilla) July 24, 2022
ಕಾರ್ಯದರ್ಶಿ ಹುದ್ದೆಯಿಂದ ನಿತೀಶ್ ರನ್ನ ತೆಗೆದುಹಾಕಲಾಗಿದೆ ಎನ್ನಲಾಗುತ್ತಿದ್ದು, ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಗಲಭೆ ಉಂಟಾಗಿದೆ. ಈ ಬೆಳವಣಿಗೆಯಿಂದ ಬೇಸತ್ತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೆಗೌಡ ರಾಜಿನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಚಿಕ್ಕಮಗಳೂರು ಕಾಂಗ್ರೆಸ್ ಘಟಕದ ಪರಿಸ್ಥಿತಿ ಮನೆಯೊಂದು, ಮೂರು ಬಾಗಿಲು ಎನ್ನುವಂತಾಗಿದೆ.








