Uttar pradesh Accident – ಬಸ್ ಗಳ ನಡುವೆ ಭೀಕರ ಅಪಘಾತ – 8 ಮಂದಿ ಸಾವು
ಎರಡು ಬಸ್‍ಗಳ ನಡುವೆ ಭೀಕರ ಅಪಘಾತ ಸಂಭವಿಸಿ 8 ಮಂದಿ ಸಾವನ್ನಪ್ಪಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಡೆದಿದೆ.
ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್‌ಪ್ರೆಸ್ ವೇನಲ್ಲಿ ಚಲಿಸುತ್ತಿದ್ದ ಬಸ್‍ಗಳು ನರೇಂದ್ರಪುರ ಮದ್ರಹಾ ಗ್ರಾಮದ ಬಳಿ ತಲುಪುತಿದ್ದಂತೆ ಅಪಘಾತ ಸಂಭವಿಸಿದೆ. ಎರಡೂ ಬಸ್‍ಗಳು ಬಿಹಾರದ ಸೀತಾಮರ್ಹಿ ಮತ್ತು ಸುಪೌಲ್‍ನಿಂದ ದೆಹಲಿಗೆ ಹೋಗುತ್ತಿದ್ದವು. ಬಸ್‍ಗಳ ನಡುವಿನ ಡಿಕ್ಕಿಯ ರಭಸಕ್ಕೆ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 3 ಮಂದಿ ಗಂಭೀರ ಗಾಯಗೊಂಡಿದ್ದಾರೆ.
#WATCH | Accident at Purvanchal expressway near Barabanki in UP leaves 6 persons dead & 18 injured after a speeding double-decker bus collided with a stationary one. 3, reported to be critical, referred to trauma centre in Lucknow. Buses were en route from Bihar to Delhi pic.twitter.com/RUELIchJh9
— ANI UP/Uttarakhand (@ANINewsUP) July 25, 2022
ಲೋನಿ ಕತ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಬಳಿ ಅಫಘಾತ ಸಂಭವಿಸಿದ್ದು, ಮೃತರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ, ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಲಕ್ನೋದ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ ಎಂದು ಬಾರಾಬಂಕಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ಮನೋಜ್ ಪಾಂಡೆ ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಸ್ತೆ ಅಪಘಾತದಲ್ಲಿ ಜೀವಹಾನಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. Uttar pradesh Accident – 8 Killed, Several Injured in Collision Of Double-Decker Buses On UP’s Purvanchal Expressway








