ಅಕ್ಷಯ್ ಕುಮಾರ್ ಅತಿ ಹೆಚ್ಚು ತೆರಿಗೆ ಪಾವತಿದಾರ – ಆದಾಯ ತೆರಿಗೆ ಇಲಾಖೆಯಿಂದ ಪ್ರಮಾಣ ಪತ್ರ..
ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತೊಮ್ಮೆ ಭಾರತದ ಅತಿ ಹೆಚ್ಚು ತೆರಿಗೆ ಪಾವತಿದಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ಕಾರಣಕ್ಕಾಗಿ ಆದಾಯ ತೆರಿಗೆ ಇಲಾಖೆಯ ಪ್ರಶಂಸನೆಗೆ ಪಾತ್ರರಾಗಿದ್ದಾರೆ.
ಬಾಲಿವುಡ್ ಕಿಲಾಡಿಗೆ ಅಕ್ಷಯ್ ಕುಮಾರ್ ಅವರ ಮನೆಗೆ ಇಂದು ಭಾರತೀಯ ಆದಾಯ ತೆರಿಗೆ ಇಲಾಖೆಯಿಂದ ವಿಶೇಷ ಪತ್ರವೊಂದು ತಲುಪಿದೆ. ಹಿಂದಿ ಚಲನಚಿತ್ರೋದ್ಯಮದಿಂದ ಅತಿ ಹೆಚ್ಚು ತೆರಿಗೆ ಪಾವತಿಸುವವರಲ್ಲಿ ನಟ ಅಕ್ಷಯ್ ಕುಮಾರ್ ಸಹ ಒಬ್ಬರು ಎಂದು ಗೌರವಯುತವಾಗಿ ಆದಾಯ ತೆರಿಗೆ ಇಲಾಖೆ ನಟನಿಗೆ ಸಮ್ಮಾನ್ ಪತ್ರವನ್ನು ನೀಡಿದೆ.

ಅಕ್ಷಯ್ ಕುಮಾರ್ ಈ ಬಾರಿ 29.5 ಕೋಟಿ ತೆರಿಗೆ ಪಾವತಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಎಲ್ಲರಿಗೂ ಮಾದರಿಯಾಗಿದ್ದು, ಹೆಚ್ಚು ತೆರಿಗೆ ಪಾವತಿಸುವ ನಟ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಸದ್ಯ ಅಕ್ಷಯ್ ಕುಮಾರ್ ಟಿನು ದೇಸಾಯಿ ಅವರ ಮುಂಬರುವ ಚಿತ್ರದ ಶೂಟಿಂಗ್ಗಾಗಿ ಬ್ರಿಟನಲ್ಲಿದ್ದಾರೆ. ಹೀಗಾಗಿ ಸಮ್ಮಾನ್ ಪತ್ರವನ್ನು ಅವರ ತಂಡ ಸ್ವೀಕರಿಸಿದೆ ಎಂದು ಹೇಳಲಾಗಿದೆ. ಅಕ್ಷಯ್ ಕುಮಾರ್ ಕಳೆದ ಐದು ವರ್ಷಗಳಿಂದ ಅತಿ ಹೆಚ್ಚು ತೆರಿಗೆ ಪಾವತಿದಾರ ಎಂಬ ಬಿರುದನ್ನು ಉಳಿಸಿಕೊಂಡಿದ್ದಾರೆ.








