HDK | ಜನತೆಗೆ ಅತ್ಯುತ್ತಮ ಆರೋಗ್ಯ ಸೌಲಭ್ಯ ಕೊಡುವುದು ನನ್ನ ಗುರಿ
ಬೆಂಗಳೂರು : ನಾನು ರೂಪಿಸಿರುವ #ಪಂಚರತ್ನ ಕಾರ್ಯಕ್ರಮದಲ್ಲಿ ಆರೋಗ್ಯವೂ ಪ್ರಮುಖ ಕಾರ್ಯಕ್ರಮ.
ಜನತೆಗೆ ಅತ್ಯುತ್ತಮ ಆರೋಗ್ಯ ಸೌಲಭ್ಯ ಕೊಡುವುದು ನನ್ನ ಗುರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕೋವಿಡ್ ವೇಳೆ ಎಲ್ಲ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುತ್ತೇವೆ ಎಂದು ಅಬ್ಬರಿಸಿ ಬೊಬ್ಬಿರಿದ ಸರಕಾರ, ಕೋವಿಡ್ ಇಳಿದ ಮೇಲೆ ತಣ್ಣಗಾಗಿದೆ.
ಆಕ್ಸಿಜನ್ ಘಟಕ, ವೆಂಟೆಲೇಟರ್ ಸೇರಿ ಖರೀದಿ ಮಾಡಿದ ವೈದ್ಯ ಪರಿಕರಗಳೆಲ್ಲ ಅನೇಕ ಕಡೆ ಧೂಳು ತಿನ್ನುತ್ತಿವೆ.
https://twitter.com/hd_kumaraswamy/status/1551410455054544902?s=20&t=i03PEPkHRTO5lVTV_aPOYw
ರಾಜ್ಯದಲ್ಲಿ ಇನ್ನೆಷ್ಟು ಆಂಬುಲೆನ್ಸ್ ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು?
ಶಿರೂರು ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಿಂದ ರಾಜ್ಯ ಬಿಜೆಪಿ ಸರಕಾರ ಕಣ್ತೆರೆಯಲೇಬೇಕು.
ಆರೋಗ್ಯ ಸೌಲಭ್ಯ ಕಲ್ಪಿಸುವುದರ ಜತೆಗೆ ಇರುವ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಸರಕಾರದ ಹೊಣೆ.
https://twitter.com/hd_kumaraswamy/status/1551410456988110849?s=20&t=i03PEPkHRTO5lVTV_aPOYw
ಆರೋಗ್ಯ ಎಲ್ಲರ ಹಕ್ಕು. ನಾನು ರೂಪಿಸಿರುವ #ಪಂಚರತ್ನ ಕಾರ್ಯಕ್ರಮದಲ್ಲಿ ಆರೋಗ್ಯವೂ ಪ್ರಮುಖ ಕಾರ್ಯಕ್ರಮ.
ಜನತೆಗೆ ಅತ್ಯುತ್ತಮ ಆರೋಗ್ಯ ಸೌಲಭ್ಯ ಕೊಡುವುದು ನನ್ನ ಗುರಿ ಎಂದು ಬರೆದುಕೊಂಡಿದ್ದಾರೆ.








