National Herald case – ಎರಡನೇ ದಿನದ ವಿಚಾರಣೆಗೆ ಆಗಮಿಸಿದ ಸೋನಿಯಾ ಗಾಂಧಿ
ನ್ಯಾಷನಲ್ ಹೆರಾಲ್ಡ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನ ಇ ಡಿ ಎರಡನೇ ದಿನದ ವಿಚಾರಣೆ ನಡೆಸುತ್ತಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಸೋನಿಯಾ ಗಾಂಧಿ ಅವರು ರಾಹುಲ್ ಮತ್ತು ಪ್ರಿಯಾಂಕಾ ಅವರೊಂದಿಗೆ ಇಡಿ ಕಚೇರಿ ತಲುಪಿದರು. ಸೋನಿಯಾ ಅವರನ್ನು ಪ್ರಶ್ನಿಸಲು ಇಡಿ 50 ಪ್ರಶ್ನೆಗಳ ಪಟ್ಟಿಯನ್ನು ಸಿದ್ಧಪಡಿಸಿದ್ದು, ಅದರಲ್ಲಿ 25 ಪ್ರಶ್ನೆಗಳನ್ನು ಜುಲೈ 21 ರಂದು ಕೇಳಲಾಗಿದೆ.
ಕಾಂಗ್ರೆಸ್ ಪ್ರಧಾನ ಕಚೇರಿಯ ಹೊರಗೆ ಹೆಚ್ಚಿನ ಸಂಖ್ಯೆಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಂಸತ್ತಿನ ಅಧಿವೇಶನ ನಡೆಯುತ್ತಿರುವುದರಿಂದ ಪ್ರತಿಭಟನೆಗಳನ್ನು ನಿಷೇಧಿಸಿ ಪ್ರಧಾನ ಕಚೇರಿಯ ಹೊರಗೆ ಸೆಕ್ಷನ್ 144 ವಿಧಿಸಲಾಗಿದೆ. ಸೋನಿಯಾ ಗಾಂಧಿ ಅವರನ್ನು ಇ ಡಿ ಪ್ರಶ್ನಿಸಿರುವ ವಿಷಯವನ್ನು ಕಾಂಗ್ರೆಸ್ ಸಂಸದರು ಸಂಸತ್ ಕಲಾಪದಲ್ಲಿ ಪ್ರಸ್ತಾಪಿಸಲಿದ್ದಾರೆ. ಇದಕ್ಕಾಗಿ ಕಾಂಗ್ರೆಸ್ ಸೋಮವಾರ ರಣತಂತ್ರ ಸಿದ್ಧಪಡಿಸಿದೆ.
ಏನಿದು ನ್ಯಾಷನಲ್ ಹೆರಾಲ್ಡ್ ಕೇಸ್?
ನ್ಯಾಷನಲ್ ಹೆರಾಲ್ಡ್ ಕುರಿತ ಮೊದಲ ಪ್ರಕರಣವನ್ನು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು 2012 ಆಗಸ್ಟ್ 2014 ರಲ್ಲಿ ದಾಖಲಿಸಿದ್ದರು, ಇಡಿ ಪ್ರಕರಣವನ್ನ ಸ್ವಯಂಪ್ರೇರಿತವಾಗಿ ಸ್ವೀಕರಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿದೆ. ಈ ಪ್ರಕರಣದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ನ ಮೋತಿಲಾಲ್ ವೋರಾ, ಆಸ್ಕರ್ ಫರ್ನಾಂಡೀಸ್, ಸ್ಯಾಮ್ ಪಿತ್ರೋಡಾ ಮತ್ತು ಸುಮನ್ ದುಬೆ ಅವರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.








