ದಕ್ಷಿಣ ಕನ್ನಡ – ಮಾರಾಕಾಸ್ತ್ರಗಳಿಂದ ದಾಳಿ ಮಾಡಿ BJP ಯುವ ಮುಖಂಡನ ಹತ್ಯೆ…
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡನನ್ನ ಕೊಲೆ ಮಾಡಲಾಗಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕಾರ್ಯಕರ್ತ ಪ್ರವೀಣ್ ನೆಟ್ಟಾರು ಎಂಬುವವರನ್ನ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಮೃತ ಪ್ರವೀಣ್ ನೆಟ್ಟಾರು ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದು, ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದರು. ಬೆಳ್ಳಾರೆ ಪೇಟೆಯಲ್ಲಿ ಇಂದು ತನ್ನ ಕೋಳಿ ಅಂಗಡಿ ಮುಚ್ಚಿ ಮನೆಗೆ ಹೊರಡುವ ಸಮಯದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ.
ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ್ದಾರೆ.








