ind-vs-wi-3rd-odi | ಟಾಸ್ ಗೆದ್ದ ಭಾರತ.. ಬ್ಯಾಟಿಂಗ್ ಆಯ್ಕೆ
ಪೋರ್ಟ್ ಆಫ್ ಸ್ಪೇಯಿನ್ ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ದದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.
ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ವೇಗಿ ಆವೇಶ್ ಖಾನ್ ಬದಲಿಗೆ ಪ್ರಸಿದ್ಧ ಕೃಷ್ಣಾ ಅವರಿಗೆ ಅವಕಾಶ ನೀಡಲಾಗಿದೆ.
ವೆಸ್ಟ್ ಇಂಡೀಸ್ ತಂಡದಲ್ಲಿ ಮೂರು ಬದಲಾವಣೆಗಳನ್ನು ಮಾಡಲಾಗಿದೆ. ಹೋಲ್ಡರ್, ಕೀಮೊ ಮತ್ತು ಕ್ಯಾರ್ಟಿ ಪ್ಲೇಯಿಂಗ್ ಇಲೆವೆನ್ ಗೆ ಬಂದಿದ್ದಾರೆ.
ಮೂರು ಪಂದ್ಯಗಳ ಏಕದಿನ ಸರಣಿ ಇದಾಗಿದ್ದು, ಟೀಂ ಇಂಡಿಯಾ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಸರಣಿ ಕೈ ವಶ ಮಾಡಿಕೊಂಡಿದೆ. ಇಂದಿನ ಪಂದ್ಯ ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದೆ.
ಇತ್ತ ವೆಸ್ಟ್ ಇಂಡೀಸ್ ತಂಡ ಸರಣಿ ಸೋತಿದ್ದು, ತವರಿನಲ್ಲಿ ಕ್ಲೀನ್ ಸ್ವೀಪ್ ಅವಮಾನ ತಪ್ಪಿಸಿಕೊಳ್ಳಲು ಹೋರಾಟ ನಡೆಸಲಿದೆ.
ತಂಡಗಳು :
ಭಾರತ (ಆಡುವ XI): ಶಿಖರ್ ಧವನ್ (ಸಿ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ದೀಪಕ್ ಹೂಡಾ, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ
ವೆಸ್ಟ್ ಇಂಡೀಸ್ : ಶಾಯ್ ಹೋಪ್(ಡಬ್ಲ್ಯೂ), ಬ್ರಾಂಡನ್ ಕಿಂಗ್, ಕೀಸಿ ಕಾರ್ಟಿ, ಶಮರ್ಹ್ ಬ್ರೂಕ್ಸ್, ನಿಕೋಲಸ್ ಪೂರನ್(ಸಿ), ಕೈಲ್ ಮೇಯರ್ಸ್, ಜೇಸನ್ ಹೋಲ್ಡರ್, ಕೀಮೋ ಪಾಲ್, ಅಕೇಲ್ ಹೋಸೇನ್, ಹೇಡನ್ ವಾಲ್ಷ್, ಜೇಡನ್ ಸೀಲ್ಸ್