ಚೆನ್ನೈ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಿಜೆಪಿ ಹಿರಿಯ ನಾಯಕ ಹಾಗೂ ತಮಿಳುನಾಡು ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಕೆ ಎನ್ ಲಕ್ಷ್ಮಣನ್ ನಿಧನರಾಗಿದ್ದಾರೆ. 92 ವರ್ಷದ ಲಕ್ಷ್ಮಣನ್ ಅವರು ಸೇಲಂನ ಸೆವ್ವೈಪೆಟ್ಟೈನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಲಕ್ಷ್ಮಣನ್, 2001-06ರ ವರೆಗೆ ಮೈಲಾಪುರ ಕ್ಷೇತ್ರವನ್ನು ಪ್ರತಿನಿಧಿಸಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಅಲ್ಲದೇ ಎರಡು ಬಾರಿ ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥರಾಗಿದ್ದರು.
ಲಕ್ಷ್ಮಣನ್ ನಿಧನಕ್ಕೆ ಮೋದಿ ಸಂತಾಪ
ಕೆ ಎನ್ ಲಕ್ಷ್ಮಣನ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ತಮಿಳುನಾಡು ಜನರಿಗೆ ಸೇವೆ ಸಲ್ಲಿಸುವಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸಂಘಟನೆಯನ್ನು ವಿಸ್ತರಿಸುವಲ್ಲಿ ಲಕ್ಷ್ಮಣನ್ ಮುಂಚೂಣಿಯಲ್ಲಿದ್ದರು. ತುರ್ತು ಪರಿಸ್ಥಿತಿ ವಿರೋಧಿ ಚಳವಳಿಯಲ್ಲಿ ಅವರ ಪಾತ್ರ ಎಂದಿಗೂ ನೆನಪಿನಲ್ಲಿಡುವಂತದ್ದು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Anguished by the demise of Shri KN Lakshmanan Ji. He was at the forefront of serving the people of Tamil Nadu and expanding the BJP organisation there. His role in the anti-Emergency movement and participation in socio-cultural activities will always be remembered. Om Shanti.
— Narendra Modi (@narendramodi) June 1, 2020
ಮೋದಿ ಅಲ್ಲದೇ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ತೆಲಂಗಾಣ ರಾಜ್ಯಪಾಲ ತಮಿಳುಸಾಯಿ ಸೌಂದರರಾಜನ್, ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಸೇರಿದಂತೆ ಅನೇಕ ಗಣ್ಯರು ಲಕ್ಷ್ಮಣನ್ ಸಾವಿಗೆ ಸಂತಾಪ ಸೂಚಿಸಿದ್ದಾರೆ.








