Congress Protest | MP ತೇಜಸ್ವಿ ಸೂರ್ಯ ವಿರುದ್ಧ ಪ್ರತಿಭಟನೆ : ಕಾಂಗ್ರೆಸ್ ವಕ್ತಾರ ಡಾ.ಶಂಕರ್ ಗುಹಾ ದ್ವಾರಕನಾಥ್ ಬೆಳ್ಳೂರು ಬಂಧನ
ಬೆಂಗಳೂರು : ಸಂಸದ, ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರ “ ಕಾಂಗ್ರೆಸ್ ಸರ್ಕಾರ ಇದ್ದಿದ್ದರೇ ಕಲ್ಲು ಹೊಡೆಯಬಹುದಾಗಿತ್ತು” ಎಂಬ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆಗೆ ಮುಂದಾಗಿದ್ದ ಕೆಪಿಸಿಸಿ ವಕ್ತಾರ ಡಾ.ಶಂಕರ್ ಗುಹಾ ದ್ವಾರಕನಾಥ್ ಬೆಳ್ಳೂರು ಅವರನ್ನ ಪೊಲೀಸರು ಬಂಧಿಸಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ಸಂಸದ ತೇಜಸ್ವಿ ಸೂರ್ಯ ಮಾತನಾಡುತ್ತಾ, “ ಕಾಂಗ್ರೆಸ್ ಸರ್ಕಾರ ಇದ್ದಿದ್ದರೇ ಕಲ್ಲು ಹೊಡೆಯಬಹುದಾಗಿತ್ತು” ಎಂದು ಹೇಳಿಕೆ ನೀಡಿದ್ದರು. ಜವಾಬ್ದಾರಿಯುವ ಸ್ಥಾನದಲ್ಲಿದ್ದು, ಸಂಸದರು ಈ ರೀತಿ ಬೇಜವಾಬ್ದಾರಿಯುವ ಹೇಳಿಕೆ ನೀಡಿದ್ದನ್ನ ಖಂಡಿಸಿ ತೇಜಸ್ವಿ ಸೂರ್ಯ ಅವರ ಗೃಹ ಕಚೇರಿಗೆ ಹೋಗಿ ಕಲ್ಲುಗಳನ್ನು ಉಡುಗೊರೆ ಮತ್ತು ಹೂಗಳನ್ನು ನೀಡುವ ಮೂಲಕ ಶಾಂತಿಯುತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಮುಂದಾಗಿತ್ತು. ಇದರ ನೇತೃತ್ವ ವಹಿಸಿದ್ದ ಕೆಪಿಸಿಸಿ ವಕ್ತಾರ ಡಾ. ಶಂಕರ ಗುಹಾ ದ್ವಾರಕನಾಥ್ ಬೆಳ್ಳೂರು ಅವರನ್ನ ದಾರಿಯ ಮಧ್ಯೆಯೇ ಪೊಲೀಸರು ಬಂಧಿಸಿದರು.
ನಾವು ಶಾಂತಿಯುತವಾಗಿ ಪ್ರತಿಭಟನೆಗೆ ಮುಂದಾಗಿದ್ದೇವು. ಆದ್ರೆ ನಮ್ಮನ್ನ ದಾರಿ ನಡುವೆಯೇ ಅರೆಸ್ಟ್ ಮಾಡಿದ್ದಾರೆ. ಹಾಗೇ ನಮ್ಮ ಪ್ರತಿಭಟನೆಯನ್ನ ತಡೆದಿದ್ದಾರೆ. ಇದೇ ರೀತಿಯ ಎಚ್ಚರಿಕೆಯನ್ನು ನೀವು ಅಲ್ಲಿ ( ಮಂಗಳೂರು ) ಮಾಡಿದ್ದರೇ ಈ ರೀತಿ ಆಗುತ್ತಿರಲಿಲ್ಲ.ಆದ್ರೂ ನಿಮ್ಮ ಕೆಲಸವನ್ನ ನೀವು ಮಾಡಿ, ಪ್ರಜಾಪ್ರಭುತ್ವದ ರಕ್ಷಣೆ ಕೆಲಸವನ್ನು ನಾವು ಮಾಡುತ್ತೇವೆ ಎಂದು ಕೆಪಿಸಿಸಿ ವಕ್ತಾರ ಡಾ. ಶಂಕರ ಗುಹಾ ದ್ವಾರಕನಾಥ್ ಬೆಳ್ಳೂರು ಹೇಳಿದ್ದಾರೆ.
ಇತ್ತ ಬಸವನಗುಡಿಯಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ರು. ಮತ್ತೊಂದು ಕಡೆ ಪತ್ರಕರ್ತೆ ಹೆಸರಲ್ಲಿ ಸಂಸದರ ಮನೆಗೆ ತೆರಳಿ ಹೂಗಳನ್ನ ನೀಡಲಿದ್ದ ಕಾಂಗ್ರೆಸ್ ಕಾರ್ಯಕರ್ತೆಯನ್ನ ಸ್ಥಳದಲ್ಲಿಯೇ ಪೊಲೀಸರು ವಶಕ್ಕೆ ಪಡೆದುಕೊಂಡರು.