ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

H.D.Kumaraswamy | ʼಡಬಲ್ ಎಂಜಿನ್ ಸರಕಾರ ಡಬಲ್ ಗೇಮ್ʼ ಆಡುತ್ತಿದೆ

Mahesh M Dhandu by Mahesh M Dhandu
July 30, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

H.D.Kumaraswamy | ʼಡಬಲ್ ಎಂಜಿನ್ ಸರಕಾರ ಡಬಲ್ ಗೇಮ್ʼ ಆಡುತ್ತಿದೆ

ಬೆಂಗಳೂರು : ಕರಾವಳಿ ಭಾಗದಲ್ಲಿ ಪ್ರತಿ ಕೊಲೆ ಬಗ್ಗೆಯೂ ಸರಕಾರಕ್ಕೆ ಮಾಹಿತಿ ಇದೆ. ಆ ಕೊಲೆಗಳು ಏಕಾಗುತ್ತಿವೆ ಎನ್ನುವುದೂ ಗೊತ್ತಿದೆ. ಆದರೆ, ʼಡಬಲ್ ಎಂಜಿನ್ ಸರಕಾರ ಡಬಲ್ ಗೇಮ್ʼ ಆಡುತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ರಾಜ್ಯ ಬಿಜೆಪಿ ಸರ್ಕಾರ NIA ತನಿಖೆಗೆ ಒಪ್ಪಿಸಿದೆ. ಈ ಸಂಬಂಧ ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ಬಿಜೆಪಿ ಸರಕಾರ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿದೆ. ಆದರೆ, ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ NIA ತನಿಖೆಗೆ ವಹಿಸಲು ಹಿಂಜರಿಯುತ್ತಿದೆ! ಏಕೆ ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ. ಇದನ್ನು ಸರ್ವಶನಾಶ ಮಾಡಿದ್ದೀರಿ.
ಹಿಂಸೆಯ ಎಂಬ ವಿಷಸರ್ಪದ ಹೆಡೆಯಡಿ ಕಟ್ಟಿರುವ ನಿಮ್ಮ ಸಾಮ್ರಾಜ್ಯ ಹಿಂಸೆಗೇ ಬಲಿ ಆಗುವುದು ಖಚಿತ. ಕಾರ್ಯಕರ್ತರ ನೆತ್ತರಿನ ಮೇಲಿನ ಅಧಿಕಾರದ ಸುಖಕ್ಕೆ ಅದೇ ಕಾರ್ಯಕರ್ತರ ಆಕ್ರೋಶವೇ ಚರಮಗೀತೆ ಬರೆಯಲಿದೆ.

ಕರಾವಳಿ ಕೆರಳಿದೆ, ಕರ್ನಾಟಕ ಕೆರಳುವುದು ಬಾಕಿ ಇದೆ. 8/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 30, 2022

ಕರಾವಳಿ ಭಾಗದಲ್ಲಿ ಪ್ರತಿ ಕೊಲೆ ಬಗ್ಗೆಯೂ ಸರಕಾರಕ್ಕೆ ಮಾಹಿತಿ ಇದೆ. ಆ ಕೊಲೆಗಳು ಏಕಾಗುತ್ತಿವೆ ಎನ್ನುವುದೂ ಗೊತ್ತಿದೆ. ಆದರೆ, ʼಡಬಲ್ ಎಂಜಿನ್ ಸರಕಾರ ಡಬಲ್ ಗೇಮ್ʼ ಆಡುತ್ತಿದೆ. ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷ ಎಂದು ಬೀಗುವ @bjp ಪಕ್ಷ, ತನಗೆ ಅಧಿಕಾರ ತಂದುಕೊಟ್ಟ ಯುವಕರ ಜೀವಗಳಿಗೇ ಗ್ಯಾರಂಟಿ ಕೊಡದಷ್ಟು ದುರ್ಬಲವಾಗಿದೆ!!

ಪ್ರವೀಣ್ ಹತ್ಯೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿ ವೀರಾವೇಶ ಮೆರೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಂಗಳೂರಿನಲ್ಲಿ ಜನರಿಗೆ ಕೊಟ್ಟ ಸಂದೇಶವೇನು? ಅವರ ನಾಲಿಗೆಯ ಮೇಲೆ ಒಮ್ಮೆಯಾದರೂ “ಶಾಂತಿ ಕಾಪಾಡಿ” ಎನ್ನುವ ಮಾತು ಬಂತಾ? ಬರಲಿಲ್ಲ!! ನೆಮ್ಮದಿಗಾಗಿ ಕಿಂಚಿತ್ ಕ್ರಮ ವಹಿಸಿದಿರಾ? ಅದೂ ಇಲ್ಲ. ಹಿಂಸೆಗೆ ಇನ್ನಷ್ಟು ತುಪ್ಪಾ ಸುರಿದು ಬಂದರು.

NIA ತನಿಖೆಗೆ ವಹಿಸಿದ ಎಷ್ಟು ಪ್ರಕರಣಗಳಿಗೆ ತಾರ್ಕಿಕ ಅಂತ್ಯ ಸಿಕ್ಕಿದೆ? ಒಂದೂ ಇಲ್ಲ. NIAಗೆ ಒಪ್ಪಿಸಿದ ಮೇಲೆ ತನಿಖೆಯಲ್ಲಿ ಮುಂದೆ ಸಾಗುತ್ತಿದ್ದ ರಾಜ್ಯ ಪೊಲೀಸರಿಗೆ ಮುಖ್ಯಮಂತ್ರಿಗಳು ಕೊಟ್ಟ ಸಂದೇಶವೇನು? ಸ್ವತಃ ಗೃಹ ಸಚಿವರಾಗಿದ್ದ ಅವರು, ಸಿಎಂ ಆದ ಮೇಲೆ ತಮ್ಮ ಅಧೀನದ ಪೊಲೀಸ್ ವ್ಯವಸ್ಥೆಯನ್ನೇ ನಂಬುತ್ತಿಲ್ಲ!! ಇದಲ್ಲವೇ ವಿಪರ್ಯಾಸ!!

NIA ತನಿಖೆಗೆ ವಹಿಸಿದ ಎಷ್ಟು ಪ್ರಕರಣಗಳಿಗೆ ತಾರ್ಕಿಕ ಅಂತ್ಯ ಸಿಕ್ಕಿದೆ? ಒಂದೂ ಇಲ್ಲ. NIAಗೆ ಒಪ್ಪಿಸಿದ ಮೇಲೆ ತನಿಖೆಯಲ್ಲಿ ಮುಂದೆ ಸಾಗುತ್ತಿದ್ದ ರಾಜ್ಯ ಪೊಲೀಸರಿಗೆ ಮುಖ್ಯಮಂತ್ರಿಗಳು ಕೊಟ್ಟ ಸಂದೇಶವೇನು? ಸ್ವತಃ ಗೃಹ ಸಚಿವರಾಗಿದ್ದ ಅವರು, ಸಿಎಂ ಆದ ಮೇಲೆ ತಮ್ಮ ಅಧೀನದ ಪೊಲೀಸ್ ವ್ಯವಸ್ಥೆಯನ್ನೇ ನಂಬುತ್ತಿಲ್ಲ!! ಇದಲ್ಲವೇ ವಿಪರ್ಯಾಸ!! 4/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 30, 2022

ರಾಜ್ಯದಲ್ಲಿ ದಕ್ಷ ಪೊಲೀಸ್ ಅಧಿಕಾರಿಗಳು ಇಲ್ಲವೆ? ನಿಷ್ಠಾವಂತ, ಪ್ರಾಮಾಣಿಕ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟರೆ ಕರಾವಳಿ ಹಿಂಸಾಕಾಂಡವನ್ನು ಮೂಲೋತ್ಪಾಟನೆ ಮಾಡಬಲ್ಲರು. ಬಿಜೆಪಿ ಸರಕಾರಕ್ಕೆ ಅದು ಬೇಕಿಲ್ಲ. ಸಮರ್ಥ ಅಧಿಕಾರಿಗಳನ್ನು ನಂಬದೆ NIAಗೆ ವಹಿಸುವ ನಾಟಕವಾಡಿ ಕಗ್ಗೊಲೆಗಳ ತನಿಖೆಗೆ ʼಸಮಾಧಿʼ ಕಟ್ಟಲು ಹೊರಟಿದೆ.

ಎರಡು ಕೊಲೆಗಳು ನಡೆದ ಬೆಳ್ಳಾರೆ ಗ್ರಾಮದಲ್ಲಾದರೂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಹೊಣೆಯ ಘನತೆಗೆ ತಕ್ಕಂತೆ ಶಾಂತಿ ರಕ್ಷಣೆ ಬಗ್ಗೆ ಒಂದು ಮಾತನ್ನಾದರೂ ಹೇಳಿದಿರಾ? ಇಲ್ಲ, ಚುನಾವಣೆ ವರ್ಷವಲ್ಲ.. ಕೊಲೆಗಳೇ ಹೆಚ್ಚೆಚ್ಚು ಆಗಬೇಕು, ಅವರ ಮತಪೆಟ್ಟಿಗೆ ಕೊಬ್ಬಬೇಕು. ನೆತ್ತರಧಾರೆ ಹರಿದಷ್ಟೂ ಭರ್ಜರಿ ಮತಧಾರೆ!!

ಬೆಳ್ಳಾರೆ ಬೇಗೆ ಇಡೀ ಕರಾವಳಿಯನ್ನು ವ್ಯಾಪಿಸಿದೆ. ಆದರೆ, ಜೀವ ಭಯದಲ್ಲಿರುವ ಎರಡು ಕೋಮುಗಳ ಜನರು ನೆಮ್ಮದಿಯಿಂದ ಬದುಕಲು ಏನು ಮಾಡಿದ್ದೀರಿ ಬಸವರಾಜ ಬೊಮ್ಮಾಯಿ ಅವರೇ? ಅವರ ಜೀವಕ್ಕೆ ಏನು ಖಾತರಿ ಕೊಟ್ಟಿದ್ದೀರಿ? ಪ್ರತಿ  ಕೊಲೆ ಆದಾಗಲೂ ಈ ಕೊಲೆಪಾತಕ ರಾಜಕಾರಣ ನಮ್ಮ ಕುಟುಂಬಕ್ಕೇ ಕೊನೆಯಾಗಲಿ ಎನ್ನುವ ತಾಯಂದಿರ ಆರ್ತನಾದಕ್ಕೆ ನಿಮ್ಮ ಉತ್ತರವೇನು ಎಂದು ಪ್ರಶ್ನಿಸಿದ್ದಾರೆ.

ಪ್ರವೀಣ್ ಹತ್ಯೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿ ವೀರಾವೇಶ ಮೆರೆದ ಮುಖ್ಯಮಂತ್ರಿ @BSBommai , ಮಂಗಳೂರಿನಲ್ಲಿ ಜನರಿಗೆ ಕೊಟ್ಟ ಸಂದೇಶವೇನು? ಅವರ ನಾಲಿಗೆಯ ಮೇಲೆ ಒಮ್ಮೆಯಾದರೂ "ಶಾಂತಿ ಕಾಪಾಡಿ" ಎನ್ನುವ ಮಾತು ಬಂತಾ? ಬರಲಿಲ್ಲ!! ನೆಮ್ಮದಿಗಾಗಿ ಕಿಂಚಿತ್ ಕ್ರಮ ವಹಿಸಿದಿರಾ? ಅದೂ ಇಲ್ಲ.
ಹಿಂಸೆಗೆ ಇನ್ನಷ್ಟು ತುಪ್ಪಾ ಸುರಿದು ಬಂದರು. 3/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 30, 2022

ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ. ಇದನ್ನು ಸರ್ವಶನಾಶ ಮಾಡಿದ್ದೀರಿ. ಹಿಂಸೆಯ ಎಂಬ ವಿಷಸರ್ಪದ ಹೆಡೆಯಡಿ ಕಟ್ಟಿರುವ ನಿಮ್ಮ ಸಾಮ್ರಾಜ್ಯ ಹಿಂಸೆಗೇ ಬಲಿ ಆಗುವುದು ಖಚಿತ. ಕಾರ್ಯಕರ್ತರ ನೆತ್ತರಿನ ಮೇಲಿನ ಅಧಿಕಾರದ ಸುಖಕ್ಕೆ ಅದೇ ಕಾರ್ಯಕರ್ತರ ಆಕ್ರೋಶವೇ ಚರಮಗೀತೆ ಬರೆಯಲಿದೆ. ಕರಾವಳಿ ಕೆರಳಿದೆ, ಕರ್ನಾಟಕ ಕೆರಳುವುದು ಬಾಕಿ ಇದೆ ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

Tags: #Saaksha TVCongressH D KUMARASWAMYJDS
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram