ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವಿಟ್ಟರ್ ನಲ್ಲಿ ರಾಜ್ಯ ಬಿಜೆಪಿ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರ ಧನ್ಯವಾದದಲ್ಲೂ ಟೀಕೆ, ವ್ಯಂಗ್ಯದ ದನಿಯೇ ಇದೆ.
ಇಂದು ಜಂಟಿ ಅಧಿವೇಶನ ಆರಂಭವಾಗಿದ್ದು, ರಾಜ್ಯಪಾಲರು ಉಭಯ ಸದನ ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಸರ್ಕಾರದ ಸಾಧನೆ ಬಗ್ಗೆ ರಾಜ್ಯಪಾಲರು ಸಂತಸ ವ್ಯಕ್ತಪಡಿಸಿದ್ದಾರೆ.
ರಾಜ್ಯಪಾಲರ ಭಾಷಣ ಹಾಗೂ ಬಿಜೆಪಿ ಪ್ರತಿಕ್ರಿಯೆಯ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ ನಮ್ಮ ಐದು ವರ್ಷಗಳ ಸರ್ಕಾರದ ಸಾಧನೆಗಳನ್ನು ರಾಜ್ಯಪಾಲರ ಭಾಷಣದ ಮೂಲಕ ಗುರುತಿಸಿ, ಶ್ಲಾಘಿಸಿದ ಮತ್ತು ತಮ್ಮ ಸರ್ಕಾರದ ಸಾಧನೆಯ ಬಗ್ಗೆ ಹೇಳಿಕೊಳ್ಳಲು ಏನೂ ಇಲ್ಲ ಎಂದು ಪ್ರಾಮಾಣಿಕವಾಗಿ ಒಪ್ಪಿಕೊಂಡ ಯಡಿಯೂರಪ್ಪ ಸರ್ಕಾರಕ್ಕೆ ಧನ್ಯವಾದಗಳು’ ಬರೆದುಕೊಂಡಿದ್ದಾರೆ.
ಮತ್ತೊಂದು ಭೀಕರ ಆಕ್ಸಿಡೆಂಟ್.. ಸ್ಥಳದಲ್ಲೇ ಮೂವರು ಐಐಟಿ ವಿದ್ಯಾರ್ಥಿಗಳ ಸಾವು
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೋಸೇಗೌಡನದೊಡ್ಡಿ ಗ್ರಾಮದ ಬಳಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ, ಇದರಲ್ಲಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಮಿಳುನಾಡು ಮೂಲದ ಲಾರಿ...