ತುಂಬಿ ಹರಿಯುತ್ತಿರು ಹಳ್ಳ ದಾಟಲು ಜೆಸಿಬಿ ಬಳಸಿದ ಗ್ರಾಮಸ್ಥರು…
ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತೊಮ್ಮೆ ಶುರುವಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದಿದ್ದು ಜನಮ ಜೀವನ ಅಸ್ಥವ್ಯಸ್ಥವಾಗಿದೆ. ಇತ್ತ ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲೂ ಭಾರಿ ಮಳೆಯಾಗಿದ್ದು ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಬಿ ಹರಿಯುತ್ತಿರುವ ಹಳ್ಳ ದಾಟಲು ಸಿರಗುಪ್ಪಾ ತಾಲೂಕಿನ ರಾರಾವಿಯಲ್ಲಿ ಗ್ರಾಮಸ್ಥರು ಜೆಸಿಬಿ ಬಳಸಿದ್ದಾರೆ.
ಬಳ್ಳಾರಿ ಜಿಲ್ಲೆ ಸಿರಗುಪ್ಪಾ ತಾಲೂಕಿನಲ್ಲಿ ವ್ಯಾಪಕ ಮಳೆಯಾಗಿದೆ. ಕಾರಣ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಬಿ ಹರಿಯುತ್ತಿರೋ ಹಳ್ಳ ದಾಟಲು ರಾರಾವಿಯಲ್ಲಿ ಗ್ರಾಮಸ್ಥರು ಜೆಸಿಬಿ ಬಳಸಿದ ವೀಡಿಯೋ ವೈರಲ್ ಆಗುತ್ತಿದೆ.
ಮಳೆಯಿಂದಾಗಿ ಹಳ್ಳದಲ್ಲಿ ನೀರು ತುಂಬಿ ಹರಿಯುತ್ತಿದ್ದು, ಜೆಸಿಬಿಯ ಬಕೆಟ್‌ನಲ್ಲಿ ಕುಳಿತು, ಬೈಕ್‍ಗಳೊಂದಿಗೆ ತುಂಬಿ ಹರಿಯುತ್ತಿರುವ ಹಳ್ಳವನ್ನು ಜನರು ದಾಟಿದ್ದಾರೆ. ರಾರಾವಿ ಗ್ರಾಮದ ಬಳಿ ಇರುವ ಸೇತುವೆ ಮೇಲೆ ನೀರು ಹರಿದ ಪರಿಣಾಮ, ಆಂಧ್ರ ಮತ್ತು ಕರ್ನಾಟಕಕ್ಕೆ ಸಂಪರ್ಕ ಹೊಂದಿದ್ದ ರಸ್ತೆ ಕಡಿತಗೊಂಡಿದೆ. Public use JCB to Cross River in bellary








