ಬೆಂಗಳೂರಲ್ಲಿ ಪತ್ತೆಯಾಗಿದ್ದು ಮಂಕಿಪಾಕ್ಸ್ ಅಲ್ಲ – ಸುಧಾಕರ್ ಸ್ಪಷ್ಟನೆ..
ಮೂತ್ರಪಿಂಡ ಕಸಿಗಾಗಿ ಬೆಂಗಳೂರಿಗೆ ಬಂದಿದ್ದ ದಕ್ಷಿಣಾ ಆಫ್ರಿಕಾ ಮೂಲದ ಪ್ರಜೆಯಲ್ಲಿ ಕಾಣಿಸಿಕೊಂಡಿದ್ದು ಮಂಕಿಪಾಕ್ಸ್ ಅಲ್ಲ ಚಿಕನ್ ಪಾಕ್ಸ್ ಎಂದು ವರದಿಯಾಗಿದೆ. ಈ ಮೂಲಕ ಬೆಂಗಳೂರಿಗರು ನಿಟ್ಟುಸಿರು ಬಿಡುವಂತಾಗಿದೆ. ವ್ಯಕ್ತಿಯ ಮಾದರಿ ಪರೀಕ್ಷಾ ವರದಿಯಲ್ಲಿ ಮಂಕಿಪಾಕ್ಸ್ ನೆಗೆಟಿವ್ ಎಂದು ದೃಢಪಟ್ಟಿದೆ.
ಈ ಕುರಿತು ರಾಜ್ಯ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಟ್ವೀಟ್ ಮಾಡಿ ತಿಳಿಸಿದ್ದಾರೆ. ಬೆಂಗಳೂರಿಗೆ ಬಂದಿದ್ದ ಇಥಿಯೋಪಿಯಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಅವರನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಈಗ ಅವರ ಪರೀಕ್ಷಾ ವರದಿಯಲ್ಲಿ ಮಂಕಿಪಾಕ್ಸ್ ನೆಗಟೀವ್ ಎಂದು ಧೃಢಪಟ್ಟಿದ್ದು, ಚಿಕನ್ ಪಾಕ್ಸ್ ಇರುವುದು ಪತ್ತೆಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿಗೆ ಬಂದಿದ್ದ ಇಥಿಯೋಪಿಯಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಅವರನ್ನು ಪರೀಕ್ಷೆಗೊಳಪಡಿಸಲಾಗಿತ್ತು.
ಈಗ ಅವರ ಪರೀಕ್ಷಾ ವರದಿಯಲ್ಲಿ ಮಂಕಿಪಾಕ್ಸ್ ನೆಗಟೀವ್ ಎಂದು ಧೃಢಪಟ್ಟಿದ್ದು, ಚಿಕನ್ ಪಾಕ್ಸ್ ಇರುವುದು ಪತ್ತೆಯಾಗಿದೆ.
1/2
— Dr Sudhakar K (@DrSudhakar_) July 31, 2022
ರಾಜ್ಯದಲ್ಲಿ ಮಂಕಿಪಾಕ್ಸ್ ತಡೆಗಟ್ಟುವ ನಿಟ್ಟಿನಲ್ಲಿ ಸೋಂಕು ಕಂಡುಬಂದಿರು ದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲೇ ಜ್ವರ, ಶೀತ, ತಲೆನೋವು, ಸ್ನಾಯು ನೋವು, ಆಯಾಸ ಮತ್ತು ದುಗ್ಧರಸ ಗ್ರಂಥಿಗಳ ಊತ ಮುಂತಾದ ಲಕ್ಷಣಗಳ ಪತ್ತೆಗಾಗಿ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.






