Commonwealth Games 2022 – ಭಾರತಕ್ಕೆ ಮತ್ತೊಂದು ಚಿನ್ನ ತಂದ ವೇಟ್‌ಲಿಫ್ಟರ್ ಜೆರೆಮಿ ಲಾಲ್ರಿನ್ನುಂಗಾ
ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ ವೇಟ್‌ಲಿಫ್ಟಿಂಗ್‌ನಲ್ಲಿ ಭಾರತ ಪದಕಗಳ ಬೇಟೆಯಾಡುತ್ತಿದೆ. ಸ್ಟಾರ್ ವೇಟ್‌ಲಿಫ್ಟರ್ ಜೆರೆಮಿ ಲಾಲ್ರಿನ್ನುಂಗಾ 67 ಕೆಜಿ ವಿಭಾಗದಲ್ಲಿ ಭಾರತಕ್ಕೆ ಎರಡನೇ ಚಿನ್ನ ತಂದುಕೊಟ್ಟಿದ್ದಾರೆ. ವೇಟ್ ಲಿಫ್ಟಿಂಗ್ ನಲ್ಲಿ ಇದು ಒಟ್ಟಾರೆ ಐದನೇ ಪದಕವಾಗಿದೆ. ಜೆರೆಮಿ ಒಟ್ಟು 300 ಕೆಜಿ ಭಾರ ಎತ್ತುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.
19 ವರ್ಷದ ಜೆರೆಮಿ ಮೊದಲ ಬಾರಿಗೆ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾಗವಹಿಸುತ್ತಿದ್ದಾರೆ. ಸ್ನ್ಯಾಚ್ ನಲ್ಲಿ 140 ಕೆಜಿ, ಕ್ಲೀನ್ ಆ್ಯಂಡ್ ಜರ್ಕ್ ನಲ್ಲಿ 160 ಕೆಜಿ ಭಾರ ಎತ್ತಿ, ಒಟ್ಟು 300 ಕೆಜಿ ಭಾರ ಎತ್ತುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಇದು ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕ ಮತ್ತು ಒಟ್ಟಾರೆ ಐದನೇ ಪದಕವಾಗಿದೆ. ಮಹಿಳೆಯರ ವಿಭಾಗದಲ್ಲಿ ಮಣಿಪುರಿ ರಾಣಿ ಮೀರಾಬಾಯಿ ಚಾನು ಅವರು ಶನಿವಾರ 49 ಕೆಜಿ ವಿಭಾಗದಲ್ಲಿ ಭಾರತಕ್ಕೆ ಮೊದಲ ಸ್ವರ್ಣ ಪದಕ ಗೆದ್ದಿದ್ದರು.
https://twitter.com/i/status/1553708105468608512
ಕಾಮನ್‌ವೆಲ್ತ್ ಕ್ರೀಡಾಕೂಟದ ಮೂರನೇ ದಿನದಲ್ಲಿ ಭಾರತಕ್ಕೆ ಇದು ಮೊದಲ ಪದಕವಾಗಿದೆ. ಎರಡನೇ ದಿನವಾದ ಶನಿವಾರ ಭಾರತ ನಾಲ್ಕು ಪದಕಗಳನ್ನು ಗೆದ್ದುಕೊಂಡಿತು.
ಭಾರತದ ಲಿಫ್ಟರ್‌ಗಳಾದ ಸಂಕೇತ್ ಸರ್ಗರ್ ಮತ್ತು ಬಿಂದ್ಯಾರಾಣಿ ದೇವಿ ಬೆಳ್ಳಿ ಪದಕ ಗೆದ್ದರೆ, ಗುರುರಾಜ ಪೂಜಾರಿ ಕಂಚಿನ ಪದಕ ಗೆದ್ದರು. ಇದರೊಂದಿಗೆ ಕಾಮನ್‌ವೆಲ್ತ್‌ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ ಐದಕ್ಕೆ ಏರಿದೆ. ಪದಕ ಪಟ್ಟಿಯಲ್ಲಿ ಭಾರತ 8ನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ 13 ಚಿನ್ನ ಸೇರಿದಂತೆ 32 ಪದಕಗಳೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರಿದಿದೆ.








