2nd-t20i-india-tour | ಎರಡನೇ ಗೆಲುವಿಗಾಗಿ ಟೀಂ ಇಂಡಿಯಾ ಕಸರತ್ತು
ವೆಸ್ಟ್ ಇಂಡೀಸ್ ವಿರುದ್ದದ ಟಿ 20 ಸರಣಿಯ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ, ಆ ಗೆಲುವಿನ ಅಭಿಯಾನವನ್ನು ಮುಂದುವರೆಸಲು ಪ್ಲಾನ್ ಮಾಡಿಕೊಂಡಿದೆ. ಆ ಮೂಲಕ ಸರಣಿಯಲ್ಲಿ ಆಧಿಪತ್ಯ ಸಾಧಿಸಲು ಟೀಂ ಇಂಡಿಯಾ ಪ್ಲಾನ್ ಮಾಡಿಕೊಂಡಿದೆ.
ಇತ್ತ ಏಕದಿನ ಸರಣಿ ಸೋತಿರುವ ವೆಸ್ಟ್ ಇಂಡೀಸ್ ಟಿ 20 ಸರಣಿಯಲ್ಲಿ ಅಬ್ಬರಿಸಲು ಪ್ಲಾನ್ ಮಾಡಿಕೊಂಡಿದೆ, ಆದ್ರೂ ಮೊದಲ ಪಂದ್ಯ ಸೋತಿರುವ ಕಾರಣ ಇಂದು ನಡೆಯಲಿರುವ ಪಂದ್ಯದಲ್ಲಿ ಗೆಲುವಿನ ಟ್ರ್ಯಾಕ್ ಗೆ ಬರಲು ಭರ್ಜರಿ ತಯಾರಿ ನಡೆಸಿದೆ.
ವಾರ್ನರ್ ಪಾರ್ಕ್ ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲುವು ಸಾಧಿಸಲು ಉಭಯ ತಂಡಗಳು ಭರ್ಜರಿ ಕಸರತ್ತು ನಡೆಸಿವೆ. ಅಂದಹಾಗೆ ಇಂದಿನ ಪಂದ್ಯಕ್ಕಾಗಿ ಟೀಂ ಇಂಡಿಯಾದಲ್ಲಿ ಹೆಚ್ಚಿನ ಬದಲಾವಣೆಗಳನ್ನು ನಿರೀಕ್ಷೆ ಮಾಡುವಂತಿಲ್ಲ.

ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಂಡವೇ ಇಂದಿನ ಪಂದ್ಯದಲ್ಲಿ ಅಖಾಡಕ್ಕಿಳಿಯಬಹುದು. ಆದ್ರೆ ಕಳೆದ ಪಂದ್ಯದಲ್ಲಿ ಮೂವರು ಸ್ಪಿನ್ನರ್ ಗಳೊಂದಿಗೆ ಕಣಕ್ಕಿಳಿದಿದ್ದ ಟೀಂ ಇಂಡಿಯಾ ಇಂದಿನ ಪಂದ್ಯದಲ್ಲಿ ಇಬ್ಬರು ಸ್ಪಿನ್ನರ್ ಗಳೊಂದಿಗೆ ಕಣಕ್ಕಿಳಿಯಬಹುದು.
ಇನ್ನುಳಿದಂತೆ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್ ನಲ್ಲಿ ಯಾವ ಬದಲಾವಣೆಗಳನ್ನು ಟೀಮ್ ಮ್ಯಾನೇಜ್ ಮೆಂಟ್ ಮಾಡುತ್ತೆ ಅನ್ನೋದನ್ನ ಕಾದು ನೋಡಬೇಕು. ಸೂರ್ಯ ಕುಮಾರ್ ಯಾದವ್ ಮತ್ತೆ ಇನ್ನಿಂಗ್ಸ್ ಓಪನ್ ಮಾಡ್ತಾರಾ..? ದೀಪಕ್ ಹೂಡಾ ಅವರಿಗೆ ಅವಕಾಶ ನೀಡುತ್ತಾರಾ ಎಂಬೋದನ್ನ ಕಾದು ನೋಡಬೇಕು.








