Mandya | ಸಕ್ಕರೆ ನಾಡು ಮಂಡ್ಯದಲ್ಲಿ ಪ್ರೊಟೆಸ್ಟ್ ವಾರ್
ಮಂಡ್ಯ : ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಮಂಡ್ಯದಲ್ಲಿ ವಿವಿಧ ಹಿಂದೂಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಆರಂಭವಾಗಿದೆ.
ಮಂಡ್ಯದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗದಿಂದ ಮೆರವಣಿಗೆ ಶುರುವಾಗಿದ್ದು, ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಡಿಸಿ ಕಚೇರಿಯತ್ತ ಮೆರವಣಿಗೆ ಸಾಗುತ್ತಿದೆ.
ಮೆರವಣಿಗೆಯಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರೂ ಭಾಗಿಯಾಗಿದ್ದಾರೆ.

ಪ್ರತಿಭಟನಾ ಮೆರವಣಿಗೆಯಿಂದಾಗಿ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಕಿಲೋಮೀಟರ್ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿವೆ.
ಇತ್ತ ರೈತ ಸಂಘಟನೆಯಿಂದ ಜಿಎಸ್‌ಟಿ ಖಂಡಿಸಿ ಪ್ರತಿಭಟನೆ ನಡೆಯುತ್ತಿದೆ.
ರೈತರಿಂದ ಟ್ರಾಕ್ಟರ್ ಮತ್ತು ಎತ್ತಿನಗಾಡಿ ಮೆರವಣಿಗೆ ನಡೆಯುತ್ತಿದೆ.
ನೂರಾರು ಸಂಖ್ಯೆಯಲ್ಲಿ ರೈತರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.







