Mandya : ಶ್ರೀರಂಗಪಟ್ಟಣದ ನದಿ ಪಾತ್ರದ ಜನತೆಗೆ ಪ್ರವಾಹ ಭೀತಿ
ಮಂಡ್ಯ : ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದೆ. ಹೀಗಾಗಿ ರಾಜ್ಯದ ಎಲ್ಲಾ ಡ್ಯಾಂಗಳು ತುಂಬಿ ಹರಿಯುತ್ತಿವೆ.
ಅದರಂತೆ ಕೆಆರ್ ಎಸ್ ಡ್ಯಾಂ ಕೂಡ ಸಂಪೂರ್ಣವಾಗಿ ಭರ್ತಿಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಡ್ಯಾಂನಿಂದ 99 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.
ಇದರಿಂದ ಶ್ರೀರಂಗಪಟ್ಟಣದ ಕಾವೇರಿ ನದಿ ಪಾತ್ರದ ಜನರಲ್ಲಿ ಪ್ರವಾಹ ಭೀತಿ ಆವರಿಸಿದೆ.

ಡ್ಯಾಂನಿಂದ ನೀರು ಹೊರಗಡೆ ಹರಿಸಿರುವ ಕಾರಣ ಶ್ರೀರಂಗಪಟ್ಟಣದ ಕಾವೇರಿ ನದಿ ಪಾತ್ರದ ಸಾವಿರಾರು ಎಕರೆ ಕೃಷಿ ಜಮೀನು ಮುಳುಗಡೆಯಾಗಿದೆ. ಜೊತೆಗೆ ನದಿ ಹಂಚಿನ ಮನೆಗಳು ಕೂಡ ಜಲಾವೃತಗೊಂಡಿವೆ.
ಈ ಕಾರಣದಿಂದಾಗಿ ಕಾವೇರಿ ನದಿ ಪಾತ್ರದಿಂದ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ಇತ್ತ ಶ್ರೀರಂಗಪಟ್ಟಣದ ನಿಮಿಷಾಂಬಾ ದೇವಸ್ಥಾನದ ಸ್ನಾನ ಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದೆ.
ಸ್ನಾನ ಘಟ್ಟದ ಮೆಟ್ಟಿಲುಗಳು ಹಾಗೂ ಬಟ್ಟೆ ಬದಲಿಸುವ ಗೃಹಗಳು ಮುಳುಗಡೆಯಾಗಿದ್ದು, ನಿಮಿಷಾಂಬಾ ಸ್ನಾನ ಘಟ್ಟಕ್ಕೆ ಭಕ್ತರಿಗೆ ನಿಷೇಧ ಏರಲಾಗಿದೆ. ಆದ್ರೆ ದೇವಸ್ಥಾನಕ್ಕೆ ಎಂದಿನಂತೆ ಭಕ್ತರಿಗೆ ಅವಕಾಶ ನೀಡಲಾಗಿದೆ.








