ಬೆಳಗಾವಿ ಗಾಲ್ಫ್ ಮೈದಾನದಲ್ಲಿ ಚಿರತೆ ಪ್ರತ್ಯಕ್ಷ – ಶಾಲೆಗಳಿಗೆ ರಜೆ
ಬೆಳಗಾವಿ : ನಗರದ ಗಾಲ್ಫ್ ಮೈದಾನದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ.
ಈ ಹಿನ್ನೆಲೆಯಲ್ಲಿ ಗಾಲ್ಫ್ ಮೈದಾನದ ಒಂದು ಕಿ.ಮೀ. ವ್ಯಾಪ್ತಿಯ 22 ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
DDPI ಮೌಖಿಕ ಸೂಚನೆ ಮೇರೆಗೆ ಮುಂಜಾಗ್ರತೆ ಕ್ರಮವಾಗಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಾಧವ ನಗರ, ಹನುಮಾನ ನಗರ, ಕುವೆಂಪು ನಗರ, ವಿಶ್ವೇಶ್ವರ ನಗರ, ಸಹ್ಯಾದ್ರಿ ನಗರ, ದೂರದರ್ಶನ ಕೇಂದ್ರ, ಕ್ಯಾಂಪ್ ಪ್ರದೇಶ ಹಿಂಡಲಗಾ, ವಿಜಯನಗರದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಆಗಸ್ಟ್ 5ರ ಮಧ್ಯಾಹ್ನ ಜಾಧವ ನಗರದಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು.
ಸದ್ಯ ಮೂರು ದಿನಗಳು ಕಳೆದರೂ ಚಿರತೆ ಪತ್ತೆಯಾಗಿಲ್ಲ.
ಸದ್ಯ ಗಾಲ್ಫ್ ಮೈದಾನದಲ್ಲಿ ಚಿರತೆ ಮರೆಯಾಗಿರುವ ಶಂಕೆ ವ್ಯಕ್ತವಾಗಿದ್ದು, 7 ಬೋನು ಇರಿಸಿ, 16 ಟ್ರ್ಯಾಪ್ ಕ್ಯಾಮರಾ ಅಳವಡಿಸಿ ಶೋಧ ಕಾರ್ಯಾಚರಣೆ ಮುಂದುವರೆಸಲಾಗಿದೆ.
50ಕ್ಕೂ ಹೆಚ್ಚು ಸಿಬ್ಬಂದಿಯಿಂದ ಚಿರತೆಗಾಗಿ ಶೋಧ ಕಾರ್ಯ ಮುಂದುವರೆದಿದೆ.








