H D Kumaraswamy | ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ದಸೂತ್ರದಾರನ ಕೊಡುಗೆ ಏನು?
ಬೆಂಗಳೂರು : ನಮ್ಮ ಪಕ್ಷದ್ದು ಇರಲಿ, ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ದಸೂತ್ರದಾರನ ಕೊಡುಗೆ ಏನು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ನಾಯಕ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಗಳ ಮೂಲಕ ಕಿಡಿಕಾರಿದ್ದು, ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ ಮತ್ತೆ ಜೆಡಿಎಸ್ ಬಗ್ಗೆ ವಿಷ ಕಾರಿಕೊಂಡಿದ್ದಾರೆ. ಜೆಡಿಎಸ್ ಪಕ್ಷ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ ಏನು ಎಂದು ಅವರು ಪ್ರಶ್ನಿಸಿದ್ದಾರೆ. ನಮ್ಮ ಪಕ್ಷದ್ದು ಇರಲಿ, ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ದಸೂತ್ರದಾರನ ಕೊಡುಗೆ ಏನು?
ನೀವು ಹೇಳಿದ ಕಾಂಗ್ರೆಸ್ ಈಗೆಲ್ಲಿದೆ? ನೀವು ಕದ್ದಮಾಲು ಹ್ಯೂಬ್ಲೆಟ್ ವಾಚು ಕಟ್ಟಿದಾಗಲೇ 1947ರ ಕಾಂಗ್ರೆಸ್ ಗೆ ಸಮಾಧಿ ಕಟ್ಟಿದಿರಿ. 5 ವರ್ಷಗಳ ನಿಮ್ಮ ಆಡಳಿತದಲ್ಲಿ ಆ ನತದೃಷ್ಟ ಕಾಂಗ್ರೆಸ್ ಪಕ್ಷಕ್ಕೆ ಎಷ್ಟು ಸಾವಿನ ಮೊಳೆ ಹೊಡೆದಿರಿ, ಲೆಕ್ಕ ಹೇಳಬೇಕೆ ಮಿಸ್ಟರ್ ಸಿದ್ದರಾಮಯ್ಯ? 6/14
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2022
ವಿಕಿಪೀಡಿಯಾ ಪ್ರಕಾರ ನಿಮ್ಮ ಜನ್ಮವರ್ಷ 1947. ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ಯ ಸಂಗ್ರಾಮಕ್ಕೆ ಧುಮುಕಿದರಾ ಮಿಸ್ಟರ್ ಸಿದ್ದರಾಮಯ್ಯ?
ಜೆಡಿಎಸ್ ಸ್ಥಾಪನೆ ಆಗಿದ್ದೇ 1999ರಲ್ಲಿ. ಆಗ ನೀವು ಎಲ್ಲಿದ್ದೀರಿ? ನಿಮಗೂ ಕಾಂಗ್ರೆಸ್ ಪಕ್ಷಕ್ಕೂ ಏನು ಸಂಬಂಧ? ನೀವು ಕಾಂಗ್ರೆಸ್ ಸೇರಿದ್ದು 2006ರಲ್ಲಿ. ಹೀಗಾಗಿ ಆ ಪಕ್ಷದ ಪೂರ್ವಾಪರದ ಬಗ್ಗೆ ಮಾತನಾಡಲು ಏನು ನೈತಿಕತೆ ಇದೆ ನಿಮಗೆ ಎಂದು ಪ್ರಶ್ನೆ ಮಾಡಿದ್ದಾರೆ.
ಗೆದ್ದಲು ಕಟ್ಟಿಕೊಂಡ ಹುತ್ತಕ್ಕೆ ಹಾವಿನಂತೆ ಸೇರಿಕೊಂಡ ನೀವು, ಸ್ವಾರ್ಥ ಬೀಜಾಸುರನಾಗಿ ಆ ಪಕ್ಷದ ಮೂಲ ನಾಯಕರನ್ನೆಲ್ಲ ನುಂಗುತ್ತಿರುವ ನಿಮ್ಮ ಭಕಾಸುರ ಬಾಯಲ್ಲಿ ಸ್ವಾತಂತ್ರ್ಯ ಹೋರಾಟದ ಪಾರಾಯಣವೇ? ನಿಮಗೆ ಅದು ಬೇರೆ ಕೇಡು.
ಅಧಿಕಾರಕ್ಕಾಗಿ ದೀನ ದಲಿತರು, ಅಲ್ಪಸಂಖ್ಯಾತರ ಹೆಸರು ಬಳಸಿಕೊಂಡು, ಹಾದಿಬೀದಿಯಲ್ಲಿ ಹೈಡ್ರಾಮಾ ಆಡಿ ಕಾಂಗ್ರೆಸ್ ಪಕ್ಷಕ್ಕೆ ವಕ್ಕರಿಸಿಕೊಂಡ ನಿಮಗೆ, ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡುವ ನೈತಿಕ ಹಕ್ಕಿದೆಯಾ? ಖಂಡಿತಾ ಇಲ್ಲ. 5/14
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2022
ಅಧಿಕಾರಕ್ಕಾಗಿ ದೀನ ದಲಿತರು, ಅಲ್ಪಸಂಖ್ಯಾತರ ಹೆಸರು ಬಳಸಿಕೊಂಡು, ಹಾದಿಬೀದಿಯಲ್ಲಿ ಹೈಡ್ರಾಮಾ ಆಡಿ ಕಾಂಗ್ರೆಸ್ ಪಕ್ಷಕ್ಕೆ ವಕ್ಕರಿಸಿಕೊಂಡ ನಿಮಗೆ, ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡುವ ನೈತಿಕ ಹಕ್ಕಿದೆಯಾ? ಖಂಡಿತಾ ಇಲ್ಲ.
ನೀವು ಹೇಳಿದ ಕಾಂಗ್ರೆಸ್ ಈಗೆಲ್ಲಿದೆ? ನೀವು ಕದ್ದಮಾಲು ಹ್ಯೂಬ್ಲೆಟ್ ವಾಚು ಕಟ್ಟಿದಾಗಲೇ 1947ರ ಕಾಂಗ್ರೆಸ್ ಗೆ ಸಮಾಧಿ ಕಟ್ಟಿದಿರಿ. 5 ವರ್ಷಗಳ ನಿಮ್ಮ ಆಡಳಿತದಲ್ಲಿ ಆ ನತದೃಷ್ಟ ಕಾಂಗ್ರೆಸ್ ಪಕ್ಷಕ್ಕೆ ಎಷ್ಟು ಸಾವಿನ ಮೊಳೆ ಹೊಡೆದಿರಿ, ಲೆಕ್ಕ ಹೇಳಬೇಕೆ ಮಿಸ್ಟರ್ ಸಿದ್ದರಾಮಯ್ಯ?
ಮಹಾತ್ಮ ಗಾಂಧಿ ಅವರ ಕಾಂಗ್ರೆಸ್ ಪಕ್ಷವನ್ನು ನೀವೆಲ್ಲಾ ಸೇರಿ ಎಂದೋ ಮುಗಿಸಿದಿರಿ. ಅದಕ್ಕೆ ಸಮಾಧಿಯೂ ಕಟ್ಟಿ ತಿಥಿ ಊಟವನ್ನೂ ಮಾಡಿದ್ದೀರಿ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸ್ವಾತಂತ್ರ್ಯ ಉದ್ಯಾನವನದಲ್ಲಿ ಹೇಳಿದ ತಲೆ ತಲೆಮಾರುಗಳ ಲೂಟಿ ಕಾಂಗ್ರೆಸ್ ಮಾತ್ರವಷ್ಟೇ ಈಗ ಉಳಿದಿರುವುದು ಎಂದು ಕುಮಾರಸ್ವಾಮಿ ಕುಟುಕಿದ್ದಾರೆ.








