Chikmagalur | ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದ ಮನೆಯ ಕರೆಂಟ್ ಕಟ್
ಚಿಕ್ಕಮಗಳೂರು : ನಗರದ ತಮಿಳು ಕಾಲೋನಿಯಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.
ಅಕ್ರಮ ಗೋಹತ್ಯೆ ಕೇಂದ್ರಗಳ ಮೇಲೆ ಚಿಕ್ಕಮಗಳೂರು ನಗರಸಭೆ ಕಳೆದ ತಿಂಗಳಿನಿಂದ ದಾಳಿ ನಡೆಸುತ್ತಿದೆ.
ಈವರೆಗೂ ನಗರದಲ್ಲಿ 20ಕ್ಕೂ ಹೆಚ್ಚು ಅಕ್ರಮ ಗೋಹತ್ಯೆ ಮನೆಗಳ ಮೇಲೆ ದಾಳಿ ಮಾಡಿ ಮನೆಯ ಗೋಡೆಗಳಿಗೆ ನೋಟಿಸ್ ಕೂಡ ಅಂಟಿಸಲಾಗಿದೆ.

ಆದ್ರೂ ಗೋಹತ್ಯೆ ನಿಲ್ಲಿಸದ ಹಿನ್ನೆಲೆ ನಗರಸಭೆ ಅಧ್ಯಕ್ಷರು, ಅಧಿಕಾರಿಗಳು ಹಾಗೂ ಪೊಲೀಸರು ನಗರದ ತಮಿಳು ಕಾಲೋನಿಯಲ್ಲಿ ಯಶ್ ಪಾಲ್ ಮನೆ ಮೇಲೆ ದಾಳಿ ಮಾಡಿದ್ದಾರೆ.
ಈ ವೇಳೆ ಮನೆಯಲ್ಲಿದ್ದ ಅಕ್ರಮ ಗೋಮಾಂಸವನ್ನ ವಶಪಡಿಸಿಕೊಂಡಿದ್ದಾರೆ. ಆದರೆ, ಮನೆಯ ಮಾಲೀಕ ಯಶ್ ಪಾಲ್ ಅದಾಗಲೇ ಅಲ್ಲಿಂದ ಪರಾರಿಯಾಗಿದ್ದಾನೆ.
ಈ ಹಿನ್ನೆಲೆ ನಗರಸಭೆ ಅಧ್ಯಕ್ಷರ ಸೂಚನೆ ಮೇರೆಗೆ ಅವರ ಮನೆಯ ವಿದ್ಯುತ್ ಸಂಪರ್ಕವನ್ನ ಕಡಿತಗೊಳಿಸಲಾಗಿದೆ.








