BSF Recruitment 2022 | ಗಡಿ ಭದ್ರತಾ ಪಡೆಯ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ
ಗಡಿ ಭದ್ರತಾ ಪಡೆಯ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ.. 324 ಹುದ್ದೆಗಳನ್ನು ಭರ್ತಿ ಮಾಡಲು ಬಿಎಸ್ ಎಫ್ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಹ ಅಭ್ಯರ್ಥಿಗಳು BSF ನ ಅಧಿಕೃತ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ನೋಂದಣಿ ಪ್ರಕ್ರಿಯೆಯು ಆಗಸ್ಟ್ 8 ರಿಂದ ಪ್ರಾರಂಭವಾಗಿದೆ. ಸೆಪ್ಟೆಂಬರ್ 6, 2022 ರಂದು ಕೊನೆಗೊಳ್ಳುತ್ತದೆ.
ಅರ್ಜಿ ಸಲ್ಲಿಸ ಬಯಸುವವರು, ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಮಧ್ಯಂತರ ಅಥವಾ ಹಿರಿಯ ಮಾಧ್ಯಮಿಕ ಶಾಲಾ ಪ್ರಮಾಣಪತ್ರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ವಯೋಮಿತಿ 18 ವರ್ಷದಿಂದ 25 ವರ್ಷ ಇರಬೇಕು.
ಆಯ್ಕೆ ಪ್ರಕ್ರಿಯೆಯು ಎರಡು ಹಂತಗಳಲ್ಲಿ ನಡೆಯಲಿದೆ.
ಲಿಖಿತ ಪರೀಕ್ಷೆ ಮತ್ತು ದೈಹಿಕ ಮಾಪನ, ASIಗಾಗಿ ಶೀಘ್ರ ಲಿಪಿ ಪರೀಕ್ಷೆ, ಟೈಪಿಂಗ್ ಪರೀಕ್ಷೆ, ದಾಖಲೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.









