ADVERTISEMENT
Saturday, March 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

H D Kumaraswamy | ನಾನು ಮುಖ್ಯಮಂತ್ರಿ ಆಗಿದ್ದು ಜಗತ್ ಮಾನ್ಯ ಸಂವಿಧಾನದ ಕಾರುಣ್ಯದಿಂದ

Mahesh M Dhandu by Mahesh M Dhandu
August 9, 2022
in Newsbeat, Politics, ರಾಜಕೀಯ
HD Kumaraswamy

ex cm hd-kumaraswamy-reacts-on-bidar-accident

Share on FacebookShare on TwitterShare on WhatsappShare on Telegram

H D Kumaraswamy | ನಾನು ಮುಖ್ಯಮಂತ್ರಿ ಆಗಿದ್ದು ಜಗತ್ ಮಾನ್ಯ ಸಂವಿಧಾನದ ಕಾರುಣ್ಯದಿಂದ

ಬೆಂಗಳೂರು : ನಾನು ಮುಖ್ಯಮಂತ್ರಿ ಆಗಿದ್ದು ಅಂದು ರಾಷ್ಟ್ರಪಿತರು ತಂದುಕೊಟ್ಟ ಸ್ವಾತಂತ್ರ್ಯ ಹಾಗೂ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಕೊಟ್ಟ ಜಗತ್ ಮಾನ್ಯ ಸಂವಿಧಾನದ ಕಾರುಣ್ಯದಿಂದ. ಇದರಲ್ಲಿ ಕಾಂಗ್ರೆಸ್ ಪಾತ್ರ ಶೂನ್ಯ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Related posts

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

March 14, 2026
ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

March 14, 2026

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು “ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಹೋರಾಟ ಮಾಡಿದ್ದೇ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಲಿ” ಎಂದು ಹೇಳಿಕೆ ನೀಡಿದ್ದು, ಇದಕ್ಕೆ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಅಪ್ರಭುದ್ಧತೆಯ ಪ್ರತೀಕ ಮತ್ತು ಪರಮ ಬಾಲಿಶ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದಲ್ಲದೇ ಸರಣಿ ಟ್ವೀಟ್ ಗಳನ್ನು ಮಾಡಿರುವ ಕುಮಾರಸ್ವಾಮಿ, ಅವರಿಗೆ ಗೊತ್ತಿರಲಿ, 1947ರ ಹಿಂದಿನ ಕಾಂಗ್ರೆಸ್ ಬೇರೆ, ಈಗಿನ ಸೋಗಲಾಡಿ ಸಿದ್ಧಹಸ್ತರು ಇರುವ ಕಾಂಗ್ರೆಸ್ಸೇ ಬೇರೆ. ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯ ತಂದುಕೊಡಲು ಮಹಾತ್ಮಗಾಂಧಿ ನೇತೃತ್ವದ ಕಾಂಗ್ರೆಸ್ ಹೋರಾಟ ಮಾಡಿತ್ತು. ನಂತರದ ಕಾಂಗ್ರೆಸ್ ಮಾಡಿದ್ದೇ ಸ್ವಾತಂತ್ರ್ಯದ ಮಾರಣಹೋಮ.

ಈಗ ಸ್ವಾತಂತ್ರೋತ್ಸವದ ನಡಿಗೆ ಎಂದು ಹೊರಟಿದ್ದೀರಿ. ಯಾರ ಸ್ವಾತಂತ್ರ್ಯಕ್ಕಾಗಿ ಎಂದು ಸ್ವಲ್ಪ ಬಿಡಿಸಿ ಹೇಳುವಿರಾ? ಇದುವರೆಗೂ ಕಾಂಗ್ರೆಸ್ ನಡೆಸಿದ ಸ್ವಾತಂತ್ರ್ಯ ವಿರೋಧಿ ಕೃತ್ಯಗಳಿಗೆ ಉತ್ತರ ಕೊಡುವಿರಾ? 7/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 9, 2022

ಮಾಡಿದ ಪಾಪಕ್ಕೆ ಇವತ್ತಿನ ಕಾಂಗ್ರೆಸ್ ಶಾಸ್ತಿ ಅನುಭವಿಸುತ್ತಿದೆ. ನಾನು ಮುಖ್ಯಮಂತ್ರಿ ಆಗಿದ್ದು ಅಂದು ರಾಷ್ಟ್ರಪಿತರು ತಂದುಕೊಟ್ಟ ಸ್ವಾತಂತ್ರ್ಯ ಹಾಗೂ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಕೊಟ್ಟ ಜಗತ್ ಮಾನ್ಯ ಸಂವಿಧಾನದ ಕಾರುಣ್ಯದಿಂದ. ಇದರಲ್ಲಿ ಕಾಂಗ್ರೆಸ್ ಪಾತ್ರ ಶೂನ್ಯ.

ನಾನು ಪಂಡಿತ್ ನೆಹರು, ಲಾಲ ಬಹದ್ದೂರ ಶಾಸ್ತ್ರಿ ಅವರ ಬಗ್ಗೆ ಹಗುರವಾಗಿ ಮಾತನಾಡಲಾರೆ. ಅವರ ನಂತರ ಕಾಂಗ್ರೆಸ್ ಹೇಗೆಲ್ಲಾ ಹಾದಿತಪ್ಪಿ ಜನರ ಸ್ವಾತಂತ್ರ್ಯ ಹರಣ ಮಾಡಿತು ಎನ್ನುವದನ್ನು ಡಿ.ಕೆ.ಶಿವಕುಮಾರ್ ಅವರು ಇತಿಹಾಸ ಓದಿದರೆ ಸತ್ಯ ಅರಿವಾಗುತ್ತದೆ ಎಂದು ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

ಸಂವಿಧಾನ ಕೊಟ್ಟವರು, ದೇಶದ ಮೊದಲನೇ ಸಂಪುಟದಲ್ಲಿ ಸಚಿವರಾಗಿದ್ದವರು ಡಾ.ಬಿ.ಆರ್.ಅಂಬೇಡ್ಕರ್ ಅವರು. ಅಂಥ ಮಹನೀಯರನ್ನು ಸಂಸತ್ತಿಗೇ ಮತ್ತೆ ಬಾರದಂತೆ ತಡೆದು, ಭಾರತದ ದೀನದಲಿತರ ದನಿಯನ್ನು ನಿರ್ದಯವಾಗಿ ಅಡಗಿಸಿದ ಪಕ್ಷದ ನಾಯಕರು ಇವತ್ತು ಸ್ವಾತಂತ್ಯದ ಭಜನೆ ಮಾಡುತ್ತಿದ್ದಾರೆ.

ನಾನು ಪಂಡಿತ್ ನೆಹರು, ಲಾಲ ಬಹದ್ದೂರ ಶಾಸ್ತ್ರಿ ಅವರ ಬಗ್ಗೆ ಹಗುರವಾಗಿ ಮಾತನಾಡಲಾರೆ. ಅವರ ನಂತರ ಕಾಂಗ್ರೆಸ್ ಹೇಗೆಲ್ಲಾ ಹಾದಿತಪ್ಪಿ ಜನರ ಸ್ವಾತಂತ್ರ್ಯ ಹರಣ ಮಾಡಿತು ಎನ್ನುವದನ್ನು ಡಿ.ಕೆ.ಶಿವಕುಮಾರ್ ಅವರು ಇತಿಹಾಸ ಓದಿದರೆ ಸತ್ಯ ಅರಿವಾಗುತ್ತದೆ. 4/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 9, 2022

ಕಾಂಗ್ರೆಸ್ ಕೋಳಿ ಕೂಗಿದರೆ ಭಾರತದಲ್ಲಿ ಬೆಳಕು ಹರಿಯುತ್ತದೆ ಎನ್ನುವ ಕಾಲ ಹೋಯಿತು. ಡಿ.ಕೆ.ಶಿವಕುಮಾರ್ ಅವರು ಇದನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬ ನಂಬಿಕೆ ನನ್ನದು. ಅಲ್ಲದೆ, ಪಕ್ಷದಲ್ಲಿ ನಿಮ್ಮ ಸ್ವಾತಂತ್ರ್ಯಹರಣ ಮಾಡುತ್ತಿರುವವರ ಕಡೆ ಗಮನ ಹರಿಸಿ.

ಈಗ ಸ್ವಾತಂತ್ರೋತ್ಸವದ ನಡಿಗೆ ಎಂದು ಹೊರಟಿದ್ದೀರಿ. ಯಾರ ಸ್ವಾತಂತ್ರ್ಯಕ್ಕಾಗಿ ಎಂದು ಸ್ವಲ್ಪ ಬಿಡಿಸಿ ಹೇಳುವಿರಾ? ಇದುವರೆಗೂ ಕಾಂಗ್ರೆಸ್ ನಡೆಸಿದ ಸ್ವಾತಂತ್ರ್ಯ ವಿರೋಧಿ ಕೃತ್ಯಗಳಿಗೆ ಉತ್ತರ ಕೊಡುವಿರಾ ಎಂದು ಪ್ರಶ್ನಿಸಿದ್ದಾರೆ.

Tags: #Saaksha TVCongressH D KUMARASWAMYJDS
ShareTweetSendShare
Join us on:

Related Posts

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

by Shwetha
March 14, 2026
0

ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ಹೋಟೆಲ್‌ಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಯುದ್ಧದ ಪರಿಣಾಮವಾಗಿ ಸಿಲಿಂಡರ್‌ಗಳ...

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

by Shwetha
March 14, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧ ಹಾಗೂ ಇರಾನ್ ದೇಶವು ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ...

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

by Shwetha
March 14, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಅಧಿಕೃತ ಚಾಲನೆ ನೀಡಲು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತಿ...

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

by Shwetha
March 14, 2026
0

ರಾಜ್ಯ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿ ಸ್ವಪಕ್ಷೀಯ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಮ್ಮ ಹೇಳಿಕೆಗೆ ಅಂಟಿಕೊಂಡಿದ್ದಾರೆ. ಪಕ್ಷದೊಳಗಿನ ಟೀಕೆಗಳಿಗೆ ಕಿವಿಗೊಡದ ಅವರು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram