Congress : ಕಾರಿನಿಂದ ಇಳಿಯುವಾಗ ಕಾಲು ಜಾರಿ ಬಿದ್ದ ಸಿದ್ದರಾಮಯ್ಯ
ಸಿದ್ದರಾಮಯ್ಯ ಅಮೃತ ಮಹೋತ್ಸವದ ಕಾರ್ಯಕ್ರಮಕ್ಕೆ ಬರುತ್ತಿದ್ದ ವಾಹನ ಅಪಘಾತಕ್ಕೀಡಾಗಿ ಗಾಯಗೊಂಡಿದ್ದವರ ಆರೋಗ್ಯ ವಿಚಾರಿಸಲು ಸಿದ್ದರಾಮಯ್ಯ ಅವರು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಅವರು ಆಸ್ಪತ್ರೆ ಬಳಿ ತೆರಳುತ್ತಿದ್ದಾಗ ಡ್ರೈವರ್ ಪಕ್ಕದ ಸೀಟಿನ ಡೋರ್ ಬಳಿ ನಿಂತು ಜನರತ್ತ ಕೈ ಬೀಸುತ್ತಿದ್ದರು.
ಈ ವೇಳೆ ಸಿದ್ದರಾಮಯ್ಯ ಅವರು ಏಕಾಏಕಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ಸಿದ್ದರಾಮಯ್ಯ ಅವರು ತಕ್ಷಣ ಕಾರಿನ ಬಾಗಿಲನ್ನು ಹಿಡಿದುಕೊಂಡಿದ್ದರು. ಈ ವೇಳೆ ಸ್ಥಳದಲ್ಲಿದ್ದ ಅಂಗರಕ್ಷಕರು ಸಿದ್ದರಾಮಯ್ಯ ಅವರನ್ನು ಎಬ್ಬಿಸಿ ಕಾರಿನಲ್ಲಿ ಕೂರಿಸಿದ್ದಾರೆ.








