Bangalore | ಸಮಾಜ ಘಾತುಕ ಶಕ್ತಿಗಳನ್ನು ಬಗ್ಗುಬಡಿಯಲು ಬಿಜೆಪಿ ಸರ್ಕಾರ ಬದ್ಧ
ಬೆಂಗಳೂರು : ಈ ಹಿಂದೆ ಡಿಜೆ ಹಳ್ಳಿ, ಹುಬ್ಬಳ್ಳಿ, ದಕ್ಷಿಣ ಕನ್ನಡ ಹಾಗೂ ಇನ್ನಿತರ ಜಿಲ್ಲೆಗಳಲ್ಲಿ ಶಾಂತಿ ಕದಡಲು ಪ್ರಯತ್ನಿಸಿದ ಮತಾಂಧ ಜಿಹಾದಿ ಶಕ್ತಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿ, ಷಡ್ಯಂತ್ರವನ್ನು ಹತ್ತಿಕ್ಕಲಾಗಿದೆ. ಸಮಾಜ ಘಾತುಕ ಶಕ್ತಿಗಳನ್ನು ಬಗ್ಗುಬಡಿಯಲು ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಬಿಜೆಪಿ ತಿಳಿಸಿದೆ.
ಶಿವಮೊಗ್ಗದ ಚಾಕು ಇರಿತ ಪ್ರಕರಣದ ಸಂಬಂಧ ಕಾಂಗ್ರೆಸ್ ವಿರುದ್ಧ ಟ್ವಿಟ್ಟರ್ ನಲ್ಲಿ ಬಿಜೆಪಿ ಕಿಡಿಕಾರಿದೆ. ಶಿವಮೊಗ್ಗದ ಚಾಕು ಇರಿತ ಪ್ರಕರಣದ ಆರೋಪಿಗಳು ಪೊಲೀಸರ ಮೇಲೆಯೇ ಚಾಕು ತೋರಿಸಿ ಬೆದರಿಸಿದ್ದಾರೆ. ಇದು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷ ಮತಾಂಧರ, ಜಿಹಾದಿಗಳ ಮೇಲೆ ಹೊಂದಿರುವ ಮಮಕಾರವೇ ಇದಕ್ಕೆ ನೇರ ಕಾರಣ. ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ ಎಂದು ಪ್ರಶ್ನಿಸಿದೆ.

ಶಿವಮೊಗ್ಗ ಚೂರಿ ಇರಿತ ಪ್ರಕರಣ : ಮೂರು ಜನ ಆರೋಪಿಗಳ ಬಂಧನ. ನದೀಮ್, ಅಬ್ದುಲ್ ರೆಹಮನ್ ಮತ್ತು ಜಬಿಯುಲ್ಲ ಪ್ರಮುಖ ಆರೋಪಿಗಳು. ಆರೋಪಿಗಳ ಬಂಧನ ಕಾರ್ಯಾಚರಣೆ ವೇಳೆ ಪೊಲೀಸರ ವಿರುದ್ಧ ಚಾಕು ಬೀಸಿದ ಆರೋಪಿಯ ಕಾಲಿಗೆ ಗುಂಡೇಟು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬರೆದುಕೊಂಡಿದೆ.








