Covid update: ದೆಹಲಿಯಲ್ಲಿ ಹೆಚ್ಚಿದ ಕೋವಿಡ್ – ದೇಶದಲ್ಲಿಂದು 9,062 ಕರೋನಾ ಸೋಂಕು ಪತ್ತೆ
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಳಿತವಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಹೊರಡಿಸಿದ ಅಂಕಿ ಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ 9,062 ಹೊಸ ಕರೋನಾ ಪ್ರಕರಣಗಳು ಪತ್ತೆಯಾಗಿವೆ. ನಿನ್ನೆಗಿಂತ 249 ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ನಿನ್ನೆ ಕರೋನಾದಿಂದಾಗಿ 36 ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ.
ದೇಶದಲ್ಲಿ ಸಕ್ರಿಯ ರೋಗಿಗಳ ಸಂಖ್ಯೆ 1,05,058 ಕ್ಕೆ ತಲುಪಿದೆ. ಇದು ನಿನ್ನೆಗಿಂತ 6,194 ಪ್ರಕರಣಗಳು ಕಡಿಮೆಯಾಗಿದೆ. ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಒಟ್ಟು 5,27,134 ಜನರು ಸಾವನ್ನಪ್ಪಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಹಾಗಾಗಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಟ್ವೀಟ್ ಮಾಡಿ “ ಸಾಂಕ್ರಾಮಿಕ ರೋಗ ಮುಗಿದಿದೆ ಎಂದು ಭಾವಿಸಬೇಡಿ ಎಂದು ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಕೋವಿಡ್ ನಿಯಮಗಳನ್ನ ಕಟ್ಟುನಿಟ್ಟಾಗಿ ಅನುಸರಿಸಲು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ ಎಂದು ವಿನಯ್ ಕುಮಾರ್ ಸಕ್ಸೇನಾ ಟ್ವೀಟ್ ಮಾಡಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 917 ಹೊಸ ಕರೋನಾ ಪ್ರಕರಣಗಳು ವರದಿಯಾಗಿವೆ. ಮೂವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. Corona Cases In India 17 August.








