Bahubali actor Nassar | ಬಾಹುಬಲಿ ನಟ ನಾಸರ್ ಆಸ್ಪತ್ರೆಗೆ ದಾಖಲು
ಶೂಟಿಂಗ್ ವೇಳೆ ನಾಸರ್ ಗೆ ಪೆಟ್ಟು
ಮೆಟ್ಟಿಲುಗಳ ಮೇಲಿಂದ ಬಿದ್ದ ನಾಸರ್
ನಾಸರ್ ಕಣ್ಣಿನ ಭಾಗಕ್ಕೆ ಪೆಟ್ಟು
ಆತಂಕದಲ್ಲಿ ಅಭಿಮಾನಿಗಳು, ಸೆಲೆಬ್ರಿಟಿಗಳು
ಬಹುಭಾಷಾ ನಟ ನಾಸರ್ ಅವರು ಶೂಟಿಂಗ್ ವೇಳೆ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಮಾಹಿತಿ ಪ್ರಕಾರ ಅವರಿಗೆ ವೈದ್ಯರು ಶಸ್ತ್ರಚಿಕಿತ್ಸೆ ನೆರವೇರಿಸಿದ್ದಾರೆ.
ತೆಲಂಗಾಣ ಪೊಲೀಸ್ ಅಕಾಡೆಮಿಯಲ್ಲಿ ನಾಸರ್ ಶೂಟಿಂಗ್ ಮಾಡುತ್ತಿದ್ದು, ಈ ವೇಳೆ ಅವರು ಮೆಟ್ಟಿಲುಗಳ ಮೇಲಿಂದ ಬಿದ್ದಿದ್ದಾರೆ. ಅವರ ಕಣ್ಣಿನ ಭಾಗಕ್ಕೆ ಪೆಟ್ಟಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಸ್ತ್ರ ಚಿಕಿತ್ಸೆ ಬಳಿಕ ನಾಸರ್ ಅವರು ಚೇತರಿಸಿಕೊಂಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡುತ್ತಿದೆ.
ಆದ್ರೆ ಈ ಬಗ್ಗೆ ಆಸ್ಪತ್ರೆಯಿಂದ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಗೊಂಡಿಲ್ಲ. ಜೊತೆಗೆ ಚಿತ್ರತಂಡ ಕೂಡ ಮಾಹಿತಿ ಹಂಚಿಕೊಂಡಿಲ್ಲ.

ಬಾಹುಬಲಿ ಸಿನಿಮಾದಲ್ಲಿ ನಾಸರ್ ಮಾಡಿದ ಬಿಜ್ಜಳದೇವನ ಪಾತ್ರ ತುಂಬಾ ಜನಪ್ರಿಯವಾಗಿತ್ತು.
ಸುಮಾರು ವರ್ಷಗಳಿಂದ ಸಿನಿಮಾ ರಂಗದಲ್ಲಿರುವ ನಾಸರ್ ಅವರು ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ಅಲ್ಲದೇ ಎಲ್ಲಾ ರೀತಿಯ ಪಾತ್ರಗಳಲ್ಲಿ ಮಿಂಚು ಹರಿಸಿದ್ದಾರೆ.
ನಾಸರ್ ಅವರ ನಟನೆಗೆ ಅನೇಕ ಪ್ರಶಸ್ತಿಗಳು ಸಂದಿದ್ದು, ತಮಿಳುನಾಡು ಸರ್ಕಾರ ನೀಡುವ ರಾಜ್ಯ ಚಲನಚಿತ್ರ ಪಶಸ್ತಿಗೆ ಆರು ಬಾರಿ ಭಾಜನರಾಗಿದ್ದಾರೆ. ವಿಲನ್ ಪಾತ್ರಕ್ಕೆ ನಂದಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.








