Siddaramaiah | ಬಿಜೆಪಿಗರ ಹೃದಯದೊಳಗೆ ಗಾಂಧೀಜಿಯೂ, ಇಲ್ಲ ಅಂಬೇಡ್ಕರ್ ಅವರೂ ಇಲ್ಲ
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರ ಪೋಟೊವನ್ನು ಪಕ್ಷದ ಕಚೇರಿಯಲ್ಲಿಯೇ ಕಸದ ಬುಟ್ಟಿಗೆ ಎಸೆದಿರುವ ಬಿಜೆಪಿ ನಾಯಕರ ಹೃದಯದೊಳಗೆ ಗಾಂಧೀಜಿಯೂ, ಇಲ್ಲ ಅಂಬೇಡ್ಕರ್ ಅವರೂ ಇಲ್ಲ. ಅವರೊಳಗೆ ಇರುವುದು ನಾಥುರಾಮ್ ಗೋಡ್ಸೆ ಮಾತ್ರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಟ್ವಿಟ್ಟರ್ ನಲ್ಲಿ ಬಿಜೆಪಿ ವಿರುದ್ಧ ಕಿಡಿಕಾರಿರುವ ಸಿದ್ದರಾಮಯ್ಯ, ವಿ.ಡಿ.ಸಾವರ್ಕರ್ ಬಗ್ಗೆ ಅಭಿಮಾನ ಇದ್ದರೆ ಅವರ ಬಗ್ಗೆ ಪುಸ್ತಕ ಬರೆದು, ಕಾರ್ಯಕ್ರಮಗಳನ್ನು ಆಯೋಜಿಸಿ ಅವರ ವಿರುದ್ಧದ ಆರೋಪಗಳಿಗೆ ಉತ್ತರ ಕೊಡಿ.. ಕೋಮುಗಲಭೆ ಹುಟ್ಟುಹಾಕಲು ಅವರ ಪೋಟೊವನ್ನು ಅಸ್ತ್ರವನ್ನಾಗಿ ಯಾಕೆ ಮಾಡುತ್ತಿದ್ದೀರಿ? ಇದನ್ನೇ ನಾನು ಪ್ರಶ್ನಿಸಿದ್ದು ಎಂದು ಸ್ಪಷ್ಟನೆ ನೀಡಿದ್ದಾರೆ.
ಮಹಾತ್ಮ ಗಾಂಧೀಜಿಯವರ ಪೋಟೊ ಹಾಕಿ ಜಾಹೀರಾತು ಕೊಡುತ್ತಿರುವ ರಾಜ್ಯದ @CMofKarnataka ಅವರು, ತಮ್ಮದೇ ಪಕ್ಷದ ಕಾರ್ಯಕರ್ತರು ಗಾಂಧೀಜಿ ಹತ್ಯೆ ಮಾಡಿದ ನಾಥುರಾಮ್ ಗೋಡ್ಸೆ ಪೋಟೊ ಮೆರವಣಿಗೆ ಮಾಡಿದ್ದಾರೆ. ಅವರ ವಿರುದ್ಧ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ? 6/9
— Siddaramaiah (@siddaramaiah) August 18, 2022
ಮಹಾತ್ಮ ಗಾಂಧೀಜಿಯವರ ಪೋಟೊ ಹಾಕಿ ಜಾಹೀರಾತು ಕೊಡುತ್ತಿರುವ ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ ಅವರು, ತಮ್ಮದೇ ಪಕ್ಷದ ಕಾರ್ಯಕರ್ತರು ಗಾಂಧೀಜಿ ಹತ್ಯೆ ಮಾಡಿದ ನಾಥುರಾಮ್ ಗೋಡ್ಸೆ ಪೋಟೊ ಮೆರವಣಿಗೆ ಮಾಡಿದ್ದಾರೆ. ಅವರ ವಿರುದ್ಧ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ?

ಸಾವರ್ಕರ್ ಅವರನ್ನು ಹೊತ್ತು ಮೆರೆಯುತ್ತಿರುವ ಬಿಜೆಪಿ ನಾಯಕರಲ್ಲಿ ಯಾರಾದರೂ 52 ವರ್ಷಗಳ ಕಾಲ ಆರ್ ಎಸ್ ಎಸ್ ಕಚೇರಿ ಮೇಲೆ ರಾಷ್ಟ್ರಧ್ವಜವನ್ನು ಯಾಕೆ ಹಾರಿಸಿರಲಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸುತ್ತೀರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬಾಬಾಸಾಹೇಬ್ ಅಂಬೇಡ್ಕರ್ ಅವರ ಪೋಟೊವನ್ನು ಪಕ್ಷದ ಕಚೇರಿಯಲ್ಲಿಯೇ ಕಸದ ಬುಟ್ಟಿಗೆ ಎಸೆದಿರುವ @BJP4Karnataka ನಾಯಕರ ಹೃದಯದೊಳಗೆ ಗಾಂಧೀಜಿಯೂ, ಇಲ್ಲ ಅಂಬೇಡ್ಕರ್ ಅವರೂ ಇಲ್ಲ. ಅವರೊಳಗೆ ಇರುವುದು ನಾಥುರಾಮ್ ಗೋಡ್ಸೆ ಮಾತ್ರ. ಈ ಸತ್ಯವನ್ನು ಮೊದಲು ಒಪ್ಪಿಕೊಳ್ಳಿ. 8/9
— Siddaramaiah (@siddaramaiah) August 18, 2022
ಬಾಬಾಸಾಹೇಬ್ ಅಂಬೇಡ್ಕರ್ ಅವರ ಪೋಟೊವನ್ನು ಪಕ್ಷದ ಕಚೇರಿಯಲ್ಲಿಯೇ ಕಸದ ಬುಟ್ಟಿಗೆ ಎಸೆದಿರುವ ಬಿಜೆಪಿ ನಾಯಕರ ಹೃದಯದೊಳಗೆ ಗಾಂಧೀಜಿಯೂ, ಇಲ್ಲ ಅಂಬೇಡ್ಕರ್ ಅವರೂ ಇಲ್ಲ. ಅವರೊಳಗೆ ಇರುವುದು ನಾಥುರಾಮ್ ಗೋಡ್ಸೆ ಮಾತ್ರ. ಈ ಸತ್ಯವನ್ನು ಮೊದಲು ಒಪ್ಪಿಕೊಳ್ಳಿ.
ಬಿ.ಎಸ್ ಯಡಿಯೂರಪ್ಪ ಅವರಿಗೆ 75 ವರ್ಷ ಆಯ್ತು ಎಂದು ಮುಖ್ಯಮಂತ್ರಿ ಸ್ಥಾನದಿಂದ ನಿರ್ದಯವಾಗಿ ಕೆಳಗಿಳಿಸಿದರು. ಅವರು ಕಣ್ಣೀರು ಹಾಕುತ್ತಾ ರಾಜೀನಾಮೆ ನೀಡಿದ್ದರು. ಈಗ ಮತ್ತೆ ಸಂಸದೀಯ ಮಂಡಳಿಗೆ ಆಯ್ಕೆ ಮಾಡಿದ್ದಾರೆ, ಈಗ ಅವರ ವಯಸ್ಸು ಕಡಿಮೆ ಆಯ್ತಾ? ಇದಕ್ಕೆ ಕಾರಣ ಅವರ ಮೇಲಿನ ಪ್ರೀತಿ ಅಲ್ಲ, ಸೋಲಿನ ಭಯ ಎಂದು ವ್ಯಂಗ್ಯವಾಡಿದ್ದಾರೆ.








