Siddaramaiah | ಮೊಟ್ಟೆಗಳ ಮೂಲಕ ಎದುರಿಸುವುದು ಹೇಡಿಗಳ ಲಕ್ಷಣ
ಕೊಡಗು : ಆಗಸ್ಟ್ 26 ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ಬಿಜೆಪಿಯ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಮಳೆಹಾನಿ ಪರಿಶೀಲಿಸಲು ಕೊಡಗಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅಲ್ಲಿನ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಅವರಿಗೆ ಘೇರಾವ್ ಹಾಕಿದ್ದು ಮಾತ್ರವಲ್ಲದೇ ಕಪ್ಪು ಬಾವುಟ ಪ್ರದರ್ಶಿಸಿ, ಅವರ ಕಾರಿಗೆ ಮೊಟ್ಟೆ ಹೊಡೆದರು. ಇದಕ್ಕೆ ರಾಜ್ಯಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಕಿಡಿಕಾರುತ್ತಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ.@BJP4Karnataka ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26 ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ.
ಬಿಜೆಪಿಯ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ.
— Siddaramaiah (@siddaramaiah) August 19, 2022
ಈ ಸಂಬಂಧ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ. ಬಿಜೆಪಿ ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26 ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ಬಿಜೆಪಿಯ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಅಲ್ಲದೆ ಸಿದ್ದಾಂತಕ್ಕೆ ಸಿದ್ದಾಂತ ಉತ್ತರವಾಗಬೇಕು, ಸಿದ್ದಾಂತವನ್ನು ಕಲ್ಲು-ಮೊಟ್ಟೆಗಳ ಮೂಲಕ ಎದುರಿಸುವುದು, ಸಮರ್ಥಿಸುವುದು ಹೇಡಿಗಳ ಲಕ್ಷಣ. ಬನ್ನಿ ಚರ್ಚೆ ಮಾಡೋಣ ಎಂದು ಸವಾಲು ಹಾಕಿದ್ದಾರೆ.








