ಮಂಗಳೂರು : ಮಂಗಳೂರು -ಕಾಸರಗೋಡು ಮಧ್ಯೆ ಉದ್ಯೋಗಿಗಳ ನಿತ್ಯ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಬಗ್ಗೆ ಆದೇಶ ಹೊರಡಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ .ಬಿ.ರೂಪೇಶ್ , ಪಾಸ್ ಬಳಸಿ ನಿತ್ಯ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ. ಉದ್ಯೋಗಿಗಳು, ವಿದ್ಯಾರ್ಥಿಗಳು, ಆರೋಗ್ಯ ಸೇವಕರು ಮತ್ತು ಸರ್ಕಾರಿ ನೌಕರರಿಗಷ್ಟೇ ಅವಕಾಶ ಮಾಡಿಕೊಡಲಾಗಿದೆ.
ಕಾಸರಗೋಡಿನಲ್ಲಿರುವ ಗಡಿನಾಡ ಕನ್ನಡಿಗರಿಗೆ ಉದ್ಯೋಗ ನಿಮಿತ್ತ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಮಂಗಳೂರಿನಲ್ಲಿ ಉದ್ಯೋಗ ಮಾಡುವ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳ ಮಧ್ಯೆ ಒಪ್ಪಂದದ ಮೂಲಕ ಸಂಚಾರ ಅನುಮತಿ ಸಿಕ್ಕಿದೆ.
ಅಲ್ಲದೆ ಪ್ರಯಾಣ ಮಾಡ ಬಯಸುವವರು Dkdpermit ವೆಬ್ ಸೈಟ್ ನಲ್ಲಿ ರಿಜಿಸ್ಟರ್ ಮಾಡಿ ಪಾಸ್ ಪಡೆಯಬಹುದು. ಉದ್ಯೋಗ ಹೊರತು ಅನ್ಯ ಕಾರ್ಯಕ್ಕೆ ಪಾಸ್ ಬಳಸಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಪಾಸ್ ಗೆ ಅರ್ಜಿ ಸಲ್ಲಿಸಲು ಆಧಾರ್, ಉದ್ಯೋಗ ವಿಳಾಸ, ಮಾಹಿತಿ ಸಲ್ಲಿಸುವುದು ಕಡ್ಡಾಯವಾಗಿದೆ. ಜೊತೆಗೆ ನಿತ್ಯ ಥರ್ಮಲ್ ಸ್ಕ್ಯಾನ್ ಮತ್ತು ಆರೋಗ್ಯ ತಪಾಸಣೆ ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದ್ದಾರೆ.








