Bangalore | ಭೀಕರ ಅಪಘಾತ: ಪತ್ನಿ ಸಾವು, ಪತಿ ಗಂಭೀರ!
ಆಕ್ಟೀವ್ ಹೋಂಡಾಗೆ ಡಿಕ್ಕಿ ಹೊಡೆದ ಲಾರಿ
ಬೆಂಗಳೂರಿನ ಕಲ್ಯಾಣನಗರದಲ್ಲಿ ನಡೆದ ಘಟನೆ
23 ವರ್ಷದ ಶ್ವೇತಾ ಮೃತ ದುರ್ದೈವಿ
28 ವರ್ಷದ ಆನಂದ್ ಸ್ಥಿತಿ ಗಂಭೀರ
ಬೆಂಗಳೂರು : ಆಕ್ವೀವ್ ಹೋಂಡಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಕಣ್ಯಾಣನಗರದಲ್ಲಿ ನಡೆದಿದೆ.
23 ವರ್ಷದ ಶ್ವೇತಾ ಮೃತ ದುರ್ದೈವಿಯಾಗಿದ್ದಾರೆ. ಘಟನೆಯಲ್ಲಿ 28 ವರ್ಷದ ಆನಂದ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇತ್ತೀಚೆಗಷ್ಟೆ ಮದುವೆಯಾಗಿದ್ದ ಈ ಇಬ್ಬರು ಶನಿವಾರ ರಾತ್ರಿ ಸಿನಮಾ ನೋಡಲು ಹೋಗಿದ್ದರು. ಸಿನಿಮಾ ಮುಗಿದ ಬಳಿಕ ಮನೆಗೆ ವಾಪಸ್ ಆಗುವಾಗ ಲಾರಿ ಡಿಕ್ಕಿ ಹೊಡೆದಿದೆ.
ಪರಿಣಾಮ ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಶ್ವೇತಾ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಇತ್ತ ಗಂಭೀರವಾಗಿ ಗಾಯಗೊಂಡಿರುವ ಆನಂದ್ ಅವರನ್ನ ಆಲ್ಟಿಯಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








