Siddaramaiah | ನಾನು ಕೊಡಗಿನಲ್ಲಿ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿಲ್ಲ
ಬೆಂಗಳೂರು : ವಾಸ್ತವದಲ್ಲಿ ನಾನು ಕೊಡಗಿನಲ್ಲಿ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿಲ್ಲ. ನಾನು ಆ ದಿನ ಕಳಲೆಪಲ್ಯ ಮತ್ತು ಅಕ್ಕಿರೊಟ್ಟಿ ತಿಂದಿದ್ದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಿಜೆಪಿ ಸಾಕಷ್ಟು ವಿವಾದ ಸೃಷ್ಠಿಸಿದ್ದು, ಇದೀಗ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಪ್ರತಿಭಟನೆ ವಿರೋಧ ಪಕ್ಷದ ಹಕ್ಕು. ಆಡಳಿತ ಪಕ್ಷ ಪ್ರತಿಭಟನೆಗೆ ಕಾರಣ ತಿಳಿದುಕೊಂಡು ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕು. ಆದರೆ ಬಿಜೆಪಿ ಶಾಸಕ ಬೋಪಯ್ಯ ಅವರು ಕೊಡಗಿಗೆ ಬರಲಿ ನೋಡ್ಕೋತಿವಿ ಎಂದು ನನಗೆ ಸವಾಲು ಹಾಕುತ್ತಾರೆ. ಇದೇ ರೀತಿ ಸವಾಲು ಹಾಕಿದ್ದ ಬಳ್ಳಾರಿ ರೆಡ್ಡಿಗಳು ಏನಾದರೂ ಎನ್ನುವುದು ಇವರ ನೆನಪಲ್ಲಿರಲಿ.
ಮಾಂಸ ತಿಂದು ದೇವಸ್ಥಾನಕ್ಕೆ ಹೋದರೂ ತಪ್ಪಲ್ಲ ಎಂದು ಹಿಂದೂ ಸಂಘಟನೆಯ ಪ್ರಮೋದ್ ಮುತಾಲಿಕ್ ಹೇಳಿದ್ದಾರಂತೆ. ಅದೇ ರೀತಿ ಜ್ಯೋತಿಷಿ ದೈವಜ್ಞ ಸೋಮಯಾಜಿಯವರು ಹೇಳಿದ್ದಾರೆ. @BJP4Karnataka ಪಕ್ಷದ ಕೇಂದ್ರದ ಮಾಜಿ ಸಚಿವ @DVSadanandGowda ಅವರು ಇಂತಹ ವಿಷಯಗಳನ್ನೆಲ್ಲ ವಿವಾದ ಮಾಡಬಾರದು ಎಂದು ಹೇಳಿದ್ದಾರೆ. 8/18#Kodagu
— Siddaramaiah (@siddaramaiah) August 23, 2022
ನನ್ನ ಮೇಲೆ ಮೊಟ್ಟೆ ಒಡೆದದ್ದು ತಪ್ಪು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಈಗ ಇವರಿಬ್ಬರು ಅದೇ ಘಟನೆಯ ವಿರುದ್ಧ ನಾವು ಮಾಡುವ ಪ್ರತಿಭಟನೆಯನ್ನೂ ತಪ್ಪು ಎಂದು ಹೇಳುತ್ತಿದ್ದಾರೆ. ಯಾಕಿಂತಹ ದ್ವಂದ್ವ ಎಂದು ಪ್ರಶ್ನಿಸಿದ್ದಾರೆ.
ನನ್ನ ಮೇಲೆ ಮೊಟ್ಟೆ ಒಡೆದದ್ದು ತಪ್ಪು ಎಂದು ಮುಖ್ಯಮಂತ್ರಿ @BSBommai ಮತ್ತು @BSYBJP ಹೇಳಿದ್ದಾರೆ. ಈಗ ಇವರಿಬ್ಬರು ಅದೇ ಘಟನೆಯ ವಿರುದ್ಧ ನಾವು ಮಾಡುವ ಪ್ರತಿಭಟನೆಯನ್ನೂ ತಪ್ಪು ಎಂದು ಹೇಳುತ್ತಿದ್ದಾರೆ.
ಯಾಕಿಂತಹ ದ್ವಂದ್ವ? 6/18#Kodagu— Siddaramaiah (@siddaramaiah) August 23, 2022
ವಾಸ್ತವದಲ್ಲಿ ನಾನು ಕೊಡಗಿನಲ್ಲಿ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿಲ್ಲ. ನಾನು ಆ ದಿನ ಕಳಲೆಪಲ್ಯ ಮತ್ತು ಅಕ್ಕಿರೊಟ್ಟಿ ತಿಂದಿದ್ದೆ. ಇದನ್ನು ಮಾಜಿ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರೂ ಹೇಳಿದ್ದಾರೆ. ವಾದಕ್ಕಾಗಿ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಬಾರದು ಎಂದು ಎಲ್ಲಿ ಹೇಳಿದೆ? ಎಂದು ಪ್ರಶ್ನಿಸಿದ್ದೆ.
ಮಾಂಸ ತಿಂದು ದೇವಸ್ಥಾನಕ್ಕೆ ಹೋದರೂ ತಪ್ಪಲ್ಲ ಎಂದು ಹಿಂದೂ ಸಂಘಟನೆಯ ಪ್ರಮೋದ್ ಮುತಾಲಿಕ್ ಹೇಳಿದ್ದಾರಂತೆ. ಅದೇ ರೀತಿ ಜ್ಯೋತಿಷಿ ದೈವಜ್ಞ ಸೋಮಯಾಜಿಯವರು ಹೇಳಿದ್ದಾರೆ. ಬಿಜೆಪಿ ಪಕ್ಷದ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಅವರು ಇಂತಹ ವಿಷಯಗಳನ್ನೆಲ್ಲ ವಿವಾದ ಮಾಡಬಾರದು ಎಂದು ಹೇಳಿದ್ದಾರೆ ಎಂದು ಬರೆದುಕೊಂಡಿದ್ದಾರೆ.