ADVERTISEMENT
Wednesday, July 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Minister Dr. K. Sudhakar | ಗುತ್ತಿಗೆದಾರರ ಆರೋಪದ ಹಿಂದೆ ಕಾಂಗ್ರೆಸ್‌ 

Mahesh M Dhandu by Mahesh M Dhandu
August 24, 2022
in Newsbeat, Politics, ರಾಜಕೀಯ
Minister Dr. K. Sudhakar Congress behind the contractor's allegation saaksha tv

Minister Dr. K. Sudhakar Congress behind the contractor's allegation saaksha tv

Share on FacebookShare on TwitterShare on WhatsappShare on Telegram

Minister Dr. K. Sudhakar | ಗುತ್ತಿಗೆದಾರರ ಆರೋಪದ ಹಿಂದೆ ಕಾಂಗ್ರೆಸ್‌ 

ಬೆಂಗಳೂರು : ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಕ್ಷಣದಿಂದ ಏನೇನೋ ಹೇಳಿಕೆ ನೀಡಲು ಆರಂಭಿಸಿದ್ದಾರೆ. ಭ್ರಷ್ಟಾಚಾರ ನಡೆಸಿ ಜನರಿಂದ ಕಿತ್ತೊಗೆಯಲ್ಪಟ್ಟ ಕಾಂಗ್ರೆಸ್‌, ಈ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

Related posts

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

July 28, 2026
vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

July 28, 2026

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಂಪಣ್ಣನವರು ವಯಸ್ಸಲ್ಲಿ ಹಾಗೂ ಅನುಭವದಲ್ಲಿ ಹಿರಿಯರು. ಅವರು ಬಯಸಿದಂತೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಭೆ ನಡೆಸಿ ಅವರ ಸಲಹೆ, ದೂರು, ಅಹವಾಲುಗಳನ್ನು ಆಲಿಸಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅವರು ಕೊಟ್ಟ ಸಲಹೆಗಳನ್ನೂ ಜಾರಿ ಮಾಡಿದ್ದಾರೆ. ಟೆಂಡರ್‌ಗಳ ಪರಿಶೀಲನೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಯಾವ ಸರ್ಕಾರವೂ ಇಂತಹ ಉತ್ತಮ ಕ್ರಮವನ್ನು ಜಾರಿ ಮಾಡಿಲ್ಲ. ಹಾಗೆಯೇ ವಿವಿಧ ಇಲಾಖೆಗಳಲ್ಲಿ ಬಾಕಿ ಇದ್ದ ಬಿಲ್‌ಗಳನ್ನು ವಿಲೇವಾರಿ ಮಾಡಲಾಗಿದೆ. ಇದುವರೆಗೆ ಕೆಂಪಣ್ಣ ದೇವರಂತೆ ಇದ್ದರು. ಆದರೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಬಳಿಕ ಏನಾಯ್ತು ಎಂದು ಗೊತ್ತಿಲ್ಲ. ಅವರಿಬ್ಬರ ನಡುವೆ ಏನು ಚರ್ಚೆಯಾಗಿದೆ ಹಾಗೂ ಚರ್ಚೆ ಬಳಿಕ ಏಕೆ ಹೇಳಿಕೆ ನೀಡುತ್ತಿದ್ದಾರೆ ಎಂಬುದು ಗೊತ್ತಿಲ್ಲ ಎಂದರು.

Minister Dr. K. Sudhakar Congress behind the contractor's allegation  saaksha tv
Minister Dr. K. Sudhakar Congress behind the contractor’s allegation saaksha tv

ಕೆಂಪಣ್ಣ ಅವರಿಗೆ ಇನ್ನೂ ಏನಾದರೂ ಸಹಾಯ ಮಾಡಬೇಕೆಂದರೆ ಸರ್ಕಾರ ಆ ಕೆಲಸ ಮಾಡಲು ಸಿದ್ಧವಿದೆ. ಅವರಿಗೆ ಸಾಮಾಜಿಕ ಕಳಕಳಿ ಇದ್ದರೆ ಲೋಕಾಯುಕ್ತಕ್ಕೆ ದೂರು ನೀಡಬಹುದಿತ್ತು. ಆದರೆ ಇವೆಲ್ಲ ಕಾಂಗ್ರೆಸ್‌ ಸ್ಪಾನ್ಸರ್‌ ಆಗಿದ್ದು, ಇದನ್ನೇ ಚುನಾವಣೆಯ ಅಜೆಂಡಾ ಮಾಡಿಕೊಳ್ಳಲು ಹೊರಟಿದ್ದಾರೆ. ಕಾಂಗ್ರೆಸ್‌ ಭ್ರಷ್ಟಾಚಾರ ಮಾಡಿದ್ದಕ್ಕೆ ಜನರು ಅವರನ್ನು ಇಡೀ ದೇಶದಿಂದ ಕಿತ್ತೊಗೆದಿದ್ದಾರೆ. ಈಗ ಬಿಜೆಪಿಯ ಪ್ರಾಮಾಣಿಕತೆಗೆ ತಿರುಮಂತ್ರ ಹಾಕಲು ಕಾಂಗ್ರೆಸ್‌ ಯತ್ನಿಸುತ್ತಿದೆ. ಇದು ಕೇವಲ ರಾಜಕೀಯ ಪ್ರೇರಿತ ಯತ್ನ. ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್‌ ಈ ವಿಚಾರವನ್ನು ಹೆಚ್ಚು ಸುದ್ದಿ ಮಾಡುತ್ತದೆ. ಈ ಮೂಲಕ ಬಿಜೆಪಿಯ ಬಗ್ಗೆ ಜನರಲ್ಲಿ ನಕಾರಾತ್ಮಕ ಭಾವನೆ ಉಂಟುಮಾಡಿ ಮತ ಕೇಳಲಾಗುತ್ತದೆ ಎಂದರು.

ಕೆಂಪಣ್ಣ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳ ಬಗ್ಗೆ ಹೇಳಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಹೋರಾಟ ಮಾಡುವುದಾದರೆ, ಭ್ರಷ್ಟಾಚಾರಿಗಳಿಗೆ ಶಿಕ್ಷೆಯಾಗಬೇಕೆಂದರೆ ಲೋಕಾಯುಕ್ತಕ್ಕೆ ದೂರು ನೀಡಬಹುದು. ಆದರೆ ಮಾಧ್ಯಮದ ಮುಂದೆ ಬಂದು ಹೇಳಿಕೆ ನೀಡುವುದನ್ನು ನೋಡಿದರೆ ಅವರ ಉದ್ದೇಶ ಏನೆಂಬುದು ಸ್ಪಷ್ಟವಾಗುತ್ತದೆ. ಕಾಂಗ್ರೆಸ್‌ ಪಕ್ಷ ಕೆಂಪಣ್ಣನವರನ್ನು ಬಲಿಪಶು ಮಾಡುವ ಪ್ರಯತ್ನ ಮಾಡುತ್ತಿದೆ. ಅವರ ಹಿರಿತನ, ಅನುಭವವನ್ನು ಕಾಂಗ್ರೆಸ್‌ ಬಳಸಿಕೊಳ್ಳುತ್ತಿದೆ. ಕೆಂಪಣ್ಣನವರು ಇದಕ್ಕೆ ಬಲಿಯಾಗುವುದು ಬೇಡ ಎಂದು ಸಲಹೆ ನೀಡಿದರು.

Tags: #Saaksha TVBJPCongressDr K Sudakar
ShareTweetSendShare
Join us on:

Related Posts

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

by admin
July 28, 2026
0

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ..ಗ್ಲಾಸ್ಗೋ ಪೋಡಿಯಂನಲ್ಲಿ ಕರುನಾಡಿನ ರೈತನ ಮಗಳ...

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

by admin
July 28, 2026
0

ವಾಸ್ತು ಶಾಸ್ತ್ರ –  ದಿಕ್ಕು ನಿರ್ದೇಶನಗಳು, ಬ್ರಹ್ಮಸ್ಥಾನ (ಮಧ್ಯಭಾಗ) ತಟಸ್ಥ ಶಕ್ತಿಯ ಕೇಂದ್ರ (Neutral Energy Zone) ಮನೆಯ ಮಧ್ಯಭಾಗವನ್ನು ತೆರವು ಮತ್ತು ಸ್ವಚ್ಛವಾಗಿಡುವುದು ಉತ್ತಮ. ಶ್ರೀ ಕ್ಷೇತ್ರ...

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

by admin
July 28, 2026
0

ಬುಧವಾರ ಜುಲೈ 29ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎನ್ನಲಾಗುವುದು ಈ ಮಂಗಳಕರ ದಿನ ಜ್ಯೋತಿಷ್ಯದಲ್ಲಿ ತುಂಬಾ ವಿಶೇಷವಾಗಿದೆ. ಯಾಕೆಂದರೆ ಈ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram