ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆ – BJP ಮುಖಂಡ ಟಿ ರಾಜ ಬಂಧನ..
ಪ್ರವಾದಿ ಮುಹಮ್ಮದ್ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮುಖಂಡ ಟಿ ರಾಜಾ ಸಿಂಗ್ ಅವರನ್ನು ಹೈದರಾಬಾದ್ನ ಅವರ ನಿವಾಸದಿಂದ ತೆಲಂಗಾಣ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಆಗಸ್ಟ್ 23 ರಂದು ನಡೆದ ಭಾರೀ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಪ್ರವಾದಿ ವಿರುದ್ಧ ನೀಡಿದ್ದ ಹೇಳಿಕೆಗಳಿಗಾಗಿ ಬಂಧಿಸಲಾಗಿದೆ.
ಆಗಸ್ಟ್ 23 ರಂದು ತೆಲಂಗಾಣದಲ್ಲಿ ನಡೆದ ಪ್ರತಿಭಟನೆಯ ನಂತರ ನಡೆಯುತ್ತಿರುವ ಪ್ರಕ್ಷುಬ್ಧತೆಯ ಹಿನ್ನೆಲೆಯಲ್ಲಿ ಗುರುವಾರ ಚಾರ್ ಮಿನಾರ್ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಟಿ ರಾಜ ಹೇಳಿಕೆಗಳ ವಿರುದ್ಧ ಹೈದರಾಬಾದ್ನ ಶಾಲಿಬಂಡಾದಲ್ಲಿ ಪ್ರತಿಭಟನಾಕಾರರ ದೊಡ್ಡ ಗುಂಪು ಜಮಾಯಿಸಿ ಪ್ರತಿಭಟನೆ ನಡೆಸಿತ್ತು.
ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನ ನೀಡುವ 10 ನಿಮಿಷಗಳ ವೀಡಿಯೊವನ್ನು ಬಿಡುಗಡೆ ಮಾಡುವ ಮೂಲಕ ಬಿಜೆಪಿ ಮುಖಂಡ ಟಿ ರಾಜ ಪ್ರತಿಭಟನೆಯನ್ನ ಪ್ರಚೋದಿಸಿದ್ದರು. ಬಳಿಕ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಅವರನ್ನು ಕಸ್ಟಡಿಗೆ ತೆಗೆದುಕೊಂಡ ದಿನವೇ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಅವರ ಹೇಳಿಕೆಗಳು “ವಿವಿಧ ವಿಷಯಗಳಲ್ಲಿ ಪಕ್ಷದ ನಿಲುವಿಗೆ ವಿರುದ್ಧವಾಗಿದೆ” ಎಂದು ಅವರನ್ನು ಬಿಜೆಪಿಯಿಂದ ಅಮಾನತುಗೊಳಿಸಲಾಗಿದೆ.