ಪತ್ನಿ ಸಾವಿಗೆ ಮನನೊಂದು ಪತ್ನಿಯೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ..
ಪತ್ನಿ ಸಾವಿಗೆ ಮನನೊಂದು ಪತಿಯೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಸದಾಶಿವ ರಾಮಪ್ಪ ಕಾಂಬಳೆ (26) ಎಂದು ಗುರುತಿಸಲಾಗಿದೆ. 2 ವರ್ಷದ ಹಿಂದೆಯಷ್ಟೇ ಸದಾಶಿವ ಕಾಂಬಳೆ, ರೂಪಾ ಅವರನ್ನು ವಿವಾಹವಾಗಿದ್ದರು. ಆದರೆ ಅನಾರೋಗ್ಯ ಕಾರಣದಿಂದ ರೂಪ ಅವರು ಕಳೆದ ಎರಡು ದಿನದ ಹಿಂದೆಯಷ್ಟೇ ನಿಧನರಾಗಿದ್ದರು.
ಪತ್ನಿ ಸಾವಿನಿಂದ ಮನನೊಂದು ಸದಾಶಿವ ರಾಮಪ್ಪ ಕಾಂಬಳೆ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾರೆ. ಕೂಡಲೇ ಅವರನ್ನು ವಿಜಯಪುರ ಜಿಲ್ಲೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರ ದೇಹ 80 % ಬೆಂಕಿಯಲ್ಲಿ ಬೆಂದುಹೋಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರು ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಕಳೆದ ರಾತ್ರಿ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಐಗಳಿ ಪೊಲೀಸ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.








